ಬೆಳಗಾವಿಯಿಂದ ಬೆಂಗಳೂರಿಗೆ ಶಿಫ್ಟ್ ಆದ ಸಿ ಟಿ ರವಿ
- Ananthamurthy m Hegde
- Dec 20, 2024
- 1 min read

ಬೆಳಗಾವಿ: ಬಿಜೆಪಿ ಪರಿಷತ್ ಸದಸ್ಯ ಸಿ ಟಿ ರವಿ ತಮ್ಮ ವಿರುದ್ಧ ಅಸಂವಿಧಾನಿಕ ಪದ ಬಳಕೆ ಮಾಡಿದ್ದಾರೆ ಎಂದು ಆರೋಪಿಸಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ದೂರು ದಾಖಲಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಪೊಲೀಸರು ಸಿಟಿ ರವಿ ಅವರನ್ನು ಬಂಧಿಸಿದ್ದಾರೆ. ಇಂದು ಬೆಳಗಾವಿ 5 ನೇ ಜೆ ಎಂ ಎಫ್ ಸಿ ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ಸಿಟಿ ರವಿ ಅವರ ಈ ಪ್ರಕರಣವನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗಿದೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಪ್ರಕರಣ ವರ್ಗಾವಣೆ
ಬೆಳಗಾವಿ 5 ನೇ ಜೆ ಎಂ ಎಫ್ ಸಿ ಕೋರ್ಟ್ ನಿಂದ ಈ ಆದೇಶ ಹೊರಬಂದಿದ್ದು, ಸಿ ಟಿ ರವಿಯವರನ್ನ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರು ಪಡಿಸಲು ಸೂಚನೆ ನೀಡಲಾಗಿದೆ. ಟ್ರಾಂಜಿಟ್ ವಾರೆಂಟ್ ಮೇಲೆ ಸಿ ಟಿ ರವಿಯನ್ನ ಪೊಲೀಸರು ಇದೀಗ ಬೆಂಗಳೂರಿಗೆ ಕರೆದುಕೊಂಡು ಹೋಗುತ್ತಿದ್ದಾರೆ.
ಬೆಳಗಾವಿಯಿಂದ ಸಿಟಿ ರವಿ ಶೀಫ್ಟ್
ಪೊಲೀಸ್ ಬೀಗಿ ಭದ್ರತೆ ಯಲ್ಲಿ ಸಿಟಿ ರವಿ ಅವರನ್ನು ಬೆಂಗಳೂರಿಗೆ ಶಿಫ್ಟ್ ಮಾಡಲಾಗುತ್ತಿದೆ. KA47M3699ಸಂಖ್ಯೆಯ ಇನೋವಾ ಕಾರಿನಲ್ಲಿ ಕರೆದೊಯ್ಯುತ್ತಿದ್ದಾರೆ. 42 ನೇ ಎಸಿಎಂಎಂ ಜನಪ್ರತಿನಿಧಿಗಳ ನ್ಯಾಯಾಲಯದ ಎದುರು ಸಿಟಿ ರವಿ ಇಂದು ಹಾಜರಾಗಲಿದ್ದಾರೆ.
ಮಧ್ಯಾಹ್ನ 3 ಗಂಟೆಗೆ ವಿಚಾರಣೆ ಆರಂಭ
ಕೆಲವೇ ಕ್ಷಣದಲ್ಲಿ ಸಿ ಟಿ ರವಿ ಜಾಮೀನು ಅರ್ಜಿ ವಿಚಾರಣೆ ಆರಂಭವಾಗಲಿದೆ. ಲಕ್ಷ್ಮೀ ಹೆಬ್ಬಾಳ್ಕರ್ ಪರ ವಕೀಲ ಶ್ಯಾಂ ಸುಂದರ್ ಹಾಜರಾಗಿದ್ದಾರೆ. ಅಶೋಕ್ ಹಾರ್ನಳ್ಳಿ ಕೂಡ ಕೋರ್ಟ್ ಗೆ ಹಾಜರಾಗಿದ್ದಾರೆ. ಬಿಜೆಪಿ ಲೀಗಲ್ ಸೆಲ್ ವಕೀಲರು ಹಾಜರಾಗಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ವಿಚಾರಣೆ ಆರಂಭ ಆಗಲಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ .
Comments