ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಹೇಳಿಕೆಗೆ ಭಾರಿ ಆಕ್ರೋಶ!
- Ananthamurthy m Hegde
- Mar 24
- 1 min read
ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಸಿಎಸ್‌ಕೆ) ನಡುವಿನ ಐಪಿಎಲ್ 2025ನೇ ಆವೃತ್ತಿಯ ಉದ್ಘಾಟನಾ ಪಂದ್ಯದ ವೇಳೆ ಭದ್ರತಾ ಉಲ್ಲಂಘನೆ ವರದಿಯಾಗಿದೆ. ಅಭಿಮಾನಿಯೊಬ್ಬರು ಕ್ರೀಡಾಂಗಣದ ಬೇಲಿಯನ್ನು ಹತ್ತಿ ಮೈದಾನಕ್ಕೆ ನುಗ್ಗಿ ಆರ್‌ಸಿಬಿ ದಿಗ್ಗಜ ವಿರಾಟ್ ಕೊಹ್ಲಿ ಅವರನ್ನು ಭೇಟಿ ಮಾಡಿದ್ದಾರೆ. ಸ್ಟಾರ್ ಬ್ಯಾಟರ್‌ನ ಕಾಲಿಗೆ ಬಿದ್ದು, ಅವರನ್ನು ಅಪ್ಪಿಕೊಂಡಿದ್ದಾರೆ. ಭದ್ರತಾ ಉಲ್ಲಂಘನೆ ಪ್ರಕರಣದಲ್ಲಿ ಕೋಲ್ಕತ್ತಾ ಪೊಲೀಸರು ಅಭಿಮಾನಿಯನ್ನು ಬಂಧಿಸಿದ್ದಾರೆ.

ಈ ಘಟನೆಯ ಬಗ್ಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಉಪಾಧ್ಯಕ್ಷ ರಾಜೀವ್ ಶುಕ್ಲಾ ಪ್ರತಿಕ್ರಿಯಿಸಿದ್ದು, ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ವಿಡಿಯೋ ಹಂಚಿಕೊಂಡಿರುವ ಅವರು, ವಿರಾಟ್ ಕೊಹ್ಲಿ ಅವರ ಅದ್ಭುತ ಫ್ಯಾನ್ ಫಾಲೋಯಿಂಗ್' ಎಂದಿದ್ದಾರೆ.
ಶುಕ್ಲಾ ಅವರು ಈ ಘಟನೆಯನ್ನು ವೈಭವೀಕರಿಸಿದ್ದಕ್ಕಾಗಿ ಟೀಕೆಗೆ ಗುರಿಯಾಗಿದ್ದು, ಅಭಿಮಾನಿಗಳು ಮತ್ತು ನೆಟ್ಟಿಗರು ಆಟಗಾರನ ಸುರಕ್ಷತೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.
ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ ಔಟಾಗದೆ 59 ರನ್ ಗಳಿಸಿ ತಂಡಕ್ಕೆ ನೆರವಾದರು. ಅರ್ಧಶತಕ ಪೂರೈಸಿದ ಕೆಲವೇ ಕ್ಷಣಗಳಲ್ಲಿ ಈ ಘಟನೆ ಸಂಭವಿಸಿದೆ. ಅಭಿಮಾನಿ ಗಾರ್ಡ್‌ರೈಲ್‌ಗಳ ಮೇಲೆ ಹಾರಿ ಅವರ ಕಡೆಗೆ ಓಡಿಹೋಗಿದ್ದಾರೆ. ವಿರಾಟ್ ಬಳಿ ತೆರಳಿ ಅವರ ಕಾಲಿಗೆರಳಿದ್ದಾರೆ ಮತ್ತು ಎದ್ದು ನಿಂತಾಗ ವಿರಾಟ್ ಕೂಡ ಅವರನ್ನು ಅಪ್ಪಿಕೊಂಡಿದ್ದಾರೆ. ಅಷ್ಟೊತ್ತಿಗಾಗಲೇ ಭದ್ರತಾ ಸಿಬ್ಬಂದಿ ಅವರನ್ನು ಕರೆದೊಯ್ದಿದ್ದಾರೆ.
ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ರಜತ್ ಪಾಟೀದಾರ್ ಬೌಲಿಂಗ್ ಆಯ್ದುಕೊಂಡರು. ಮೊದಲಿಗೆ ಬ್ಯಾಟ್ ಮಾಡಿದ ಕೆಕೆಆರ್ ನಿಗದಿತ 20 ಓವರ್‌ಗಳಲ್ಲಿ 174 ರನ್ ಗಳಿಸಷ್ಟೇ ಸಾಧ್ಯವಾಯಿತು. ಆರ್‌ಸಿಬಿ ಬೌಲಿಂಗ್ ಮೋಡಿಗೆ ದಂಗಾಯಿತು. 175 ರನ್‌ಗಳ ಗುರಿ ಬೆನ್ನತ್ತಿದ ಆರ್‌ಸಿಬಿ ಫಿಲ್ ಸಾಲ್ಟ್ (56) ಮತ್ತು ವಿರಾಟ್ ಕೊಹ್ಲಿ (59*) ತಂಡಕ್ಕೆ ಸ್ಫೋಟಕ ಆರಂಭ ನೀಡಿದರು. ಆರ್‌ಸಿಬಿ ಪವರ್‌ಪ್ಲೇ ಅಂತ್ಯದ ವೇಳೆಗೆ ವಿಕೆಟ್ ಕಳೆದುಕೊಳ್ಳದೆ 80 ರನ್ ಗಳಿಸಿತು. ಇದು ಲೀಗ್‌ನ ಇತಿಹಾಸದಲ್ಲಿ ಅವರ ಎರಡನೇ ಅತ್ಯಧಿಕ ಸ್ಕೋರ್ ಆಗಿದೆ.
ಕೊನೆಗೆ 17ನೇ ಓವರ್‌ನಲ್ಲಿ ರನ್ ಗುರಿ ಬೆನ್ನತ್ತಿದ ಆರ್‌ಸಿಬಿ ಕೆಕೆಆರ್ ವಿರುದ್ಧ ಏಳು ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು.
תגובות