ಬಸವನಬೈಲು ಹೊಳೆ ಸೇತುವೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ಭೀಮಣ್ಣ
- Ananthamurthy m Hegde
- Nov 21, 2024
- 1 min read
ಸಿದ್ದಾಪುರ: ತಾಲೂಕಿನ ಹಲಗೇರಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬಸವನಬೈಲಿನ ಹೊಳೆಗೆ ಸಣ್ಣ ನೀರಾವರಿ ಇಲಾಖೆ ವತಿಯಿಂದ ೧ ಕೋಟಿ ರೂ ವೆಚ್ಚದ ಸೇತುವೆ ಸಹಿತ ಕಿಂಡಿ ಆಣೆಕಟ್ಟು ನಿರ್ಮಾಣ ಕಾಮಗಾರಿಗೆ ಶಾಸಕ ಭೀಮಣ್ಣ ನಾಯ್ಕ ಬುಧವಾರ ಭೂಮಿ ಪೂಜೆ ನೆರವೇರಿಸಿದರು. ಅರಣ್ಯ ಅತಿಕ್ರಮಣಕ್ಕೆ ಸಂಬAಧಿಸಿ ೭೫ ವರ್ಷದ ದಾಖಲೆ ಬದಲು ೨೫ ವರ್ಷದ ದಾಖಲೆ ಆಧಾರದಲ್ಲಿ ಮಂಜೂರಾತಿ ನೀಡಲು ಕಾನೂನಿನಲ್ಲಿ ಬದಲಾವಣೆ ತರುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗುವುದು. ಕಿಂಡಿ ಆಣೆಕಟ್ಟನ್ನು ಗುಣಮಟ್ಟದೊಂದಿಗೆ ನಿರ್ಮಿಸಿ ರೈತರ ಜಮೀನಿಗೆ ಸರಿಯಾಗಿ ನೀರು ಹಾಯುವಂತೆ ಮಾಡಬೇಕು ಎಂದು ಸೂಚಿಸಿದರು. ಈ ವೇಳೆ ಹಲಗೇರಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಮೋಹಿನಿ ನಾಯ್ಕ, ಉಪಾಧ್ಯಕ್ಷ ಪರಮೇಶ್ವರ ಗೌಡ, ಜಿಪಂ ಮಾಜಿ ಸದಸ್ಯೆ ಇಂದಿರಾ ನಾಯ್ಕ, ತಾಲೂಕಾ ಗ್ಯಾರೆಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ಜಿ.ನಾಗರಾಜ ಮತ್ತಿತರರು ಉಪಸ್ಥಿತರಿದ್ದರು.














Comments