ಭಾರೀ ಮಳೆ ಮುನ್ಸೂಚನೆ : ಹಬ್ಬದ ಸಂಭ್ರಮಕ್ಕೆ ತಣ್ಣೀರು?
- Ananthamurthy m Hegde
- Oct 30, 2024
- 1 min read

ಬೆಂಗಳೂರು ಸೇರಿದಂತೆ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ವಾರದ ಬಿಡುವಿನ ಬಳಿಕ ಮತ್ತೆ ಮಳೆ ಸುರಿಯತೊಡಗಿದೆ.
ಬೆಂಗಳೂರಿನಲ್ಲಿ ಬುಧವಾರ ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣವಿದ್ದು ಚಳಿ ಗಾಳಿ ಬೀಸತೊಡಗಿತ್ತು. ಅಲ್ಲಲ್ಲಿ ಮಳೆ ಕೂಡ ಸುರಿದಿದೆ. ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮತ್ತು ಕರಾವಳಿ ಭಾಗದಲ್ಲಿ ಕೂಡ ಅಲ್ಲಲ್ಲಿ ಮಳೆಯಾದ ವರದಿಗಳಿವೆ.
ರಾಜ್ಯದಲ್ಲಿ ಈ ವಾರ ಮತ್ತೆ ಮಳೆ ಆಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೆ ಮಳೆಯೊಂದಿಗೆ ಮಂಜು ಮತ್ತು ಚಳಿ ಕೂಡ ಇರಲಿದೆ ಎಂಬ ಸೂಚನೆ ನೀಡಿದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು, ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊAಡಿರುವ ಮಲೆನಾಡು ಜಿಲ್ಲೆಗಳಲ್ಲಿ ಅಕ್ಟೋಬರ್ ೩೧ ರಿಂದ ನವೆಂಬರ್ ೨ ರವರೆಗೆ ಭಾರಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಮುನ್ಸೂಚನೆ ನೀಡಲಾಗಿದೆ.















Comments