ಭಾರತದ 52ನೇ ಮುಖ್ಯ ನ್ಯಾಯಮೂರ್ತಿಯಾಗಿ ಬಿ ಆರ್ ಗವಾಯಿ ಪ್ರಮಾಣ ವಚನ ಸ್ವೀಕಾರ
- Ananthamurthy m Hegde
- 1 day ago
- 1 min read

ನವದೆಹಲಿ: ಭಾರತದ 52 ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಅವರು ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪ್ರತಿಜ್ಞಾ ವಿಧಿ ಬೋಧಸಿದರು. ಪ್ರಮಾಣ ವಚನ ಸ್ವೀಕರಿಸಿದ ನಂತರ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಉಪ ರಾಷ್ಟ್ರಪತಿ ಜಗದೀಪ್ ಧಂಖರ್, ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಇತರ ಗಣ್ಯರನ್ನು ಸಿಜೆಐ ಸ್ವಾಗತಿಸಿದರು.65 ವರ್ಷ ವಯಸ್ಸಿನ ನಿವೃತ್ತ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರ ಉತ್ತರಾಧಿಕಾರಿಯಾಗಿ ನ್ಯಾಯಮೂರ್ತಿ ಭೂಷಣ್ ಗವಾಯಿ ಅಧಿಕಾರ ವಹಿಸಿಕೊಂಡಿದ್ದಾರೆ.
Comments