top of page

ಮುಖ್ಯ ವಾಹಿನಿಗೆ ಬಂದ ಲಕ್ಷ್ಮಿ ತೊಂಬಟ್ಟು

  • Writer: Ananthamurthy m Hegde
    Ananthamurthy m Hegde
  • Feb 2
  • 1 min read

ಉಡುಪಿ: ಹಲವು ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಕುಂದಾಪುರ ತಾಲೂಕಿನ ತೊಂಬಟ್ಟುವಿನ ನಕ್ಸಲ್ ಲಕ್ಷ್ಮೀ ಭಾನುವಾರ (ಫೆ.2) ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ಶರಣಾಗಿದ್ದಾರೆ.

ಶರಣಾಗತಿಗೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ಆಗಮಿಸಿದ ಲಕ್ಷ್ಮೀ ತೊಂಬಟ್ಟು ಅವರು, ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿದರು.

ಶರಣಾಗತಿ ಮತ್ತು ಪುನರ್ವಸತಿ ಸಮಿತಿಯ ಸದಸ್ಯ ಶ್ರೀಪಾಲ್ ಜೊತೆ ನಕ್ಸಲ್ ಲಕ್ಷ್ಮಿ, ಎಸ್‌ಪಿ ಕಚೇರಿಗೆ ಆಗಮಿಸಿದರು.

ಅಲ್ಲಿ ಶರಣಾಗತಿ ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಲಾಯಿತು. ಬಳಿಕ ಭದ್ರತೆಯೊಂದಿಗೆ ಡಿಸಿ ಕಚೇರಿಗೆ ಲಕ್ಷ್ಮಿಯನ್ನು ಪೊಲೀಸರು ಕರೆದೊಯ್ದರು. ಶರಣಾದ ನಕ್ಸಲ್ ಜೊತೆ ಆಕೆಯ ಸಹೋದರ ಮತ್ತು ಬಂಧುಗಳು ಹಾಜರಿದ್ದರು.

ನಕ್ಸಲ್‌ ಚಟುವಟಿಕೆಗಳಲ್ಲಿ ಉಡುಪಿ ಜಿಲ್ಲೆಯ ವಿಕ್ರಂಗೌಡ ಹಾಗೂ ಲಕ್ಷ್ಮಿ ತೊಂಬಟ್ಟು ತೊಡಗಿಸಿಕೊಂಡಿದ್ದರು. ಲಕ್ಷ್ಮೀಯವರು 2006 ಮಾರ್ಚ್ 6ರಂದು ಊರು ತೊರೆದಿದ್ದರು. ಅವರು ನಕ್ಸಲ್ ಹೋರಾಟದಲ್ಲಿ ಸಕ್ರಿಯರಾಗಿದ್ದರು.

 
 
 

Comments


Top Stories

bottom of page