top of page

ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ನಿಧ

  • Writer: Ananthamurthy m Hegde
    Ananthamurthy m Hegde
  • Dec 10, 2024
  • 1 min read

ree

ಮಾಜಿ ಸಿಎಂ, ಕರ್ನಾಟಕ ಕಂಡ ಅಪರೂಪದ ರಾಜಕಾರಣಿ, ಮುಖ್ಯಮಂತ್ರಿಗಳಲ್ಲಿ ಒಬ್ಬರಾಗಿದ್ದ ಎಸ್‌ಎಂ ಕೃಷ್ಣ ವಿಧಿವಶರಾಗಿದ್ದಾರೆ. ಸದಾಶಿವನಗರದಲ್ಲಿ ಗಣ್ಯರಿಗೆ ಹಾಗೂ ಸಾರ್ವಜನಿಕರಿಗೆ ಎಸ್‌.ಎಂ ಕೃಷ್ಣರವರ ಪಾರ್ಥೀವ ಶರೀರ ಅಂತಿಮ ದರ್ಶನ ವ್ಯವಸ್ಥೆ ಮಾಡಲಾಗಿದೆ. ಮಿತಿಮೀರದ ಭಾಷೆ, ಟೀಕೆ ಟಿಪ್ಪಣ್ಣಿಯಲ್ಲೂ ಶಿಸ್ತನ್ನು ರೂಡಿಸಿಕೊಂಡಿದ್ದರು. ರಾಜಕಾರಣಿಗಳಿಗೆ ಮಾದರಿಯಾಗಿದ್ದರು. 92 ವರ್ಷದ ಎಸ್‌ಎಂ ಕೃಷ್ಣ ಅವರು, ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು, ಅನೇಕ ಬಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದರು. ಶ್ವಾಸಕೋಶ ಸೊಂಕಿನಿಂದ ಬಳಲುತ್ತಿದ್ದ ಅವರು, ಬೆಂಗಳೂರಿನ ಸದಾಶಿವನಗರದಲ್ಲಿನ ತಮ್ಮ ನಿವಾಸದಲ್ಲಿ ಮಂಗಳವಾರ ನಸುಕಿನಜಾವ 2.45ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.ಇಂದು ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ನಾಳೆ ಹುಟ್ಟೂರಾದ ಮದ್ದೂರಿನಲ್ಲಿ ಅಂತ್ಯೆಕ್ರಿಯೆ ನಡೆಯುಲಿದೆ.

Comments


Top Stories

bottom of page