top of page

ಮಂತ್ರಾಲಯ ಭಕ್ತರಿಗೆ ಗುಡ್ ನ್ಯೂಸ್

  • Writer: Ananthamurthy m Hegde
    Ananthamurthy m Hegde
  • Jan 9
  • 1 min read

ಬೆಂಗಳೂರು: ಮಂತ್ರಾಲಯ ಭಕ್ತರಿಗೆ ಗುಡ್‌ನ್ಯೂಸ್‌ ಸಿಕ್ಕಿದ್ದು, ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ವಿಶೇಷ ರೈಲು ಸೌಲಭ್ಯ ಕಲ್ಪಿಸಲು ನೈರುತ್ಯ ರೈಲ್ವೆ ಮುಂದಾಗಿದೆ. ಬೆಂಗಳೂರಿನಿಂದ ಕಲಬುರಗಿ ನಡುವೆ ಮಂತ್ರಾಲಯ ರೋಡ್‌ ಮಾರ್ಗವಾಗಿ 3 ಟ್ರಿಪ್‌ ವಿಶೇಷ ರೈಲು ಓಡಾಟ ನಡೆಸಲಿದೆ.

ree

ಈ ಬಗ್ಗೆ ನೈರುತ್ಯ ರೈಲ್ವೆ ಪ್ರಕಟಣೆ ನೀಡಿದ್ದು, " ಪೊಂಗಲ್/ ಮಕರ ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಕಲಬುರಗಿ ನಿಲ್ದಾಣಗಳ ನಡುವೆ ಪ್ರತಿ ದಿಕ್ಕಿನಲ್ಲಿ ಮೂರು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲಾಗುತ್ತಿದೆ " ಎಂದು ತಿಳಿಸಿದೆ.

ಯಾವ ದಿನಗಳಂದು ರೈಲು ಸಂಚಾರ?

ರೈಲು ಸಂಖ್ಯೆ 06519 ಎಸ್ಎಂವಿಟಿ ಬೆಂಗಳೂರು-ಕಲಬುರಗಿ ವಿಶೇಷ ಎಕ್ಸ್ ಪ್ರೆಸ್ ರೈಲು ಜನವರಿ 10, 11 ಮತ್ತು 12 ರಂದು ರಾತ್ರಿ 9:15 ಕ್ಕೆ ಎಸ್ಎಂವಿಟಿ ಬೆಂಗಳೂರಿನಿಂದ ಹೊರಟು ಮರುದಿನ ಬೆಳಿಗ್ಗೆ 7:40 ಕ್ಕೆ ಕಲಬುರಗಿಯನ್ನು ತಲುಪಲಿದೆ.

ರೈಲು ಸಂಖ್ಯೆ 06520 ಕಲಬುರಗಿ - ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್ ಪ್ರೆಸ್ ರೈಲು ಜನವರಿ 11, 12 ಮತ್ತು 13 ರಂದು ಬೆಳಿಗ್ಗೆ 9:35 ಕ್ಕೆ ಕಲಬುರಗಿಯಿಂದ ಹೊರಟು ಅದೇ ದಿನ ರಾತ್ರಿ 8:00 ಗಂಟೆಗೆ ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ತಲುಪಲಿದೆ.

ಎಲ್ಲೆಲ್ಲಿ ನಿಲುಗಡೆ?

ಈ ರೈಲು ಎರಡೂ ಮಾರ್ಗದಲ್ಲಿ ಯಲಹಂಕ, ಧರ್ಮಾವರಂ, ಅನಂತಪುರ, ಗುಂತಕಲ್, ಆದೋನಿ, ಮಂತ್ರಾಲಯಂ ರೋಡ್, ರಾಯಚೂರು, ಕೃಷ್ಣ, ಯಾದಗಿರಿ ಮತ್ತು ಶಹಾಬಾದ್ ನಿಲ್ದಾಣಗಳಲ್ಲಿ ನಿಲ್ಲಲಿವೆ. ಈ ವಿಶೇಷ ರೈಲು 16 ಸೆಕೆಂಡ್ ಕ್ಲಾಸ್ ಸ್ಲೀಪರ್ ಬೋಗಿಗಳು ಮತ್ತು 2 ಎಸ್ಎಲ್ಆರ್ / ಡಿ ಸೇರಿದಂತೆ 18 ಬೋಗಿಗಳನ್ನು ಒಳಗೊಂಡಿರುತ್ತದೆ.

ಈ ರೈಲುಗಳ ಪ್ರತಿ ನಿಲ್ದಾಣದ ಆಗಮನ, ನಿರ್ಗಮನ ಸಮಯಕ್ಕಾಗಿ, ಪ್ರಯಾಣಿಕರು ಭಾರತೀಯ ರೈಲ್ವೆ ಜಾಲತಾಣ www.enquiry.indianrail.gov.in ಗೆ ಭೇಟಿ ನೀಡಿ ಅಥವಾ ಸಹಾಯವಾಣಿ 139ಕ್ಕೆ ಕರೆ ಮಾಡುವ ಮೂಲಕ ಮಾಹಿತಿ ಪಡೆದುಕೊಳ್ಳಬಹುದು.

Comments


Top Stories

bottom of page