ಮಠ ಖ್ಯಾತಿಯ ಗುರುಪ್ರಸಾದ್ ಆತ್ಮಹತ್ಯೆ
- Ananthamurthy m Hegde
- Nov 3, 2024
- 1 min read

ಬೆಂಗಳೂರು: ಮಠ ಸಿನೆಮಾ ಖ್ಯಾತಿಯ ನಿರ್ದೇಶಕ, ನಟ ಗುರುಪ್ರಸಾದ್ (೫೨) ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ಮಾದನಾಯಕನಹಳ್ಳಿ ಬಳಿ ಇರುವ ಅಪಾರ್ಟ್ ಮೆಂಟ್ ನಲ್ಲಿ ನೇಣುಬಿಗಿದುಕೊಂಡು ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಗುರು ಪ್ರಸಾದ್ ನಿರ್ದೇಶಿಸಿದ್ದ, ನವರಸನಾಯಕ ಜಗ್ಗೇಶ್ ಅಭಿನಯದ ಮಠ ಸಿನಿಮಾ ಭಾರಿ ಜನಪ್ರಿಯತೆ ಪಡೆದುಕೊಂಡಿತ್ತು.
ಹಲವಾರು ಸಿನಿಮಾಗಳಲ್ಲಿ ನಟನಾಗಿ, ನಿರ್ದೇಶಕನಾಗಿ ಕಾರ್ಯನಿರ್ವಹಿಸಿದ್ದ ಗುರುಪ್ರಸಾದ್, ಸಾಲಗಾರರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Comments