ಮನ್ ಕಿ ಬಾತ್‌ನಲ್ಲಿ ಮೋದಿ ಮಹತ್ವದ ಸಂದೇಶ
- Ananthamurthy m Hegde
- May 25
- 1 min read

ಪಾಕಿಸ್ತಾನದ ವಿರುದ್ಧ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ನಡೆದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮೊದಲ ಬಾರಿಗೆ ಮನ್ ಕಿ ಬಾತ್ ನಲ್ಲಿ ಮಾತನಾಡಿದರು.
ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ 'ಮನ್ ಕಿ ಬಾತ್' ನ 122 ನೇ ಸಂಚಿಕೆಯಲ್ಲಿ ಹಲವು ವಿಚಾರಗಳನ್ನು ಉಲ್ಲೇಖಿಸಿದ ಪ್ರಧಾನಿ ಮೋದಿ, ಆಪರೇಷನ್ ಸಿಂಧೂರ್ ಬದಲಾದ ಭಾರತದ ಚಿತ್ರಣ ಎಂದು ಸ್ಪಷ್ಟಪಡಿಸಿದರು. ಭಯೋತ್ಪಾದನೆಯ ವಿರುದ್ಧ ಒಗ್ಗಟ್ಟಾಗಿದ್ದಕ್ಕಾಗಿ ದೇಶವಾಸಿಗಳನ್ನು ಮೋದಿ ಶ್ಲಾಘಿಸಿದರು. ಭಯೋತ್ಪಾದನೆಯನ್ನು ಕೊನೆಗೊಳಿಸುವುದು ನಮ್ಮ ಸಂಕಲ್ಪವಾಗಿದೆ. ‘ಆಪರೇಷನ್ ಸಿಂಧೂರ್' ಕೇವಲ ಮಿಲಿಟರಿ ಕಾರ್ಯಾಚರಣೆಯಲ್ಲ, ಬದಲಾಗಿ ನಮ್ಮ ದೃಢನಿಶ್ಚಯ, ಧೈರ್ಯ ಮತ್ತು ಬದಲಾಗುತ್ತಿರುವ ಭಾರತದ ಚಿತ್ರಣವಾಗಿದೆ ಎಂದು ಹೇಳಿದರು.















Comments