ಮನೆಗೆ ಆಕಸ್ಮಿಕ ಬೆಂಕಿ : ಅಪಾರ ನಷ್ಟ
- Ananthamurthy m Hegde
- Nov 24, 2024
- 1 min read
ಭಟ್ಕಳ : ಆಕಸ್ಮಿಕವಾಗಿ ಮನೆಯೊಂದಕ್ಕೆ ಬೆಂಕಿ ತಗುಲಿ ಭಾಗಶಃ ಸುಟ್ಟು ಕರಕಲಾದ ಘಟನೆ ತಾಲೂಕಿನ ಬೆಳ್ನಿ ಗ್ರಾಮದಲ್ಲಿ ನಡೆದಿದೆ. ಜ್ಯೋತಿ ಮೋಹನ ನಾಯ್ಕ ದಂಪತಿ ದೇವರಿಗೆ ದೀಪ ಹಚ್ಚಿ ಮಗನನ್ನು ಕರೆದುಕೊಂಡು ಮಾರುಕಟ್ಟೆಗೆ ತೆರಳಿದ್ದರು. ಈ ಸಮಯದಲ್ಲಿ ಮನೆಗೆ ಆಕಸ್ಮಿಕವಾಗಿ ಬೆಂಕಿ ಹೊತ್ತುಕೊಂಡಿದ್ದು, ಬೆಂಕಿಯನ್ನು ನೋಡಿ ಅಕ್ಕಪಕ್ಕದ ಮನೆಯವರು ಮನೆ ಯಜಮಾನ ಮೋಹನ ನಾಯ್ಕರವರಿಗೆ ಮನೆಗೆ ಬೆಂಕಿ ಹೊತ್ತಿಕೊಂಡಿರುವ ವಿಷಯವನ್ನು ತಿಳಿಸಿದ್ದಾರೆ. ಅಲ್ಲಿಂದ ಮನೆಗೆ ವಾಪಾಸ್ಸು ಹೊರುಟು ಬಂದ ದಂಪತಿಗಳು ಅಕ್ಕಪಕ್ಕದ ಮನೆಯವರು ಹಾಗೂ ಸ್ನೇಹಿತರೊಂದಿಗೆ ಸೇರಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಅಷ್ಟರಲ್ಲೊಳಗಾಗಲೇ ಮನೆಯಲ್ಲಿರುವ ಬಹುತೇಕ ವಸ್ತುಗಳು ಬೆಂಕಿಗೆ ಆಹುತಿಯಾಗಿ ಅಪಾರ ನಷ್ಟ ಸಂಭವಿಸಿದೆ.
Коментарі