ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಆಯ್ಕೆ
- Ananthamurthy m Hegde
- Dec 4, 2024
- 1 min read

ಮುಂಬಯಿ: ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಆಯ್ಕೆಯಾಗಿದ್ದು, ಈ ಬಗ್ಗೆ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನವಾಗಿದೆ. ಈ ಬಗ್ಗೆ ಅಧಿಕೃತ ಘೋಷಣೆ ಮಾತ್ರ ಇನ್ನೂ ಬಾಕಿ ಇದೆ.
ಮಹಾರಾಷ್ಟ್ರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಬುಧವಾರ ಮುಂಬಯಿನಲ್ಲಿ ನಡೆದಿದೆ. ವೀಕ್ಷಕರಾಗಿ ನೇಮಕಗೊಂಡಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಸಮ್ಮುಖದಲ್ಲಿ ಬಿಜೆಎಲ್‌ಪಿ ನಾಯಕನ ಆಯ್ಕೆ ನಡೆಯಲಿದ್ದು, ಸಭೆ ಬಳಿಕ ಔಪಚಾರಿಕವಾಗಿ ಹೆಸರು ಘೋಷಣೆ ಮಾಡಲಾಗಿದೆ.
ಮೈತ್ರಿ ನಾಯಕನ ಆಯ್ಕೆಯ ಕಗ್ಗಂಟಿನ ನಡುವೆ ಮಹಾಯುತಿ ಮೈತ್ರಿ ಸರ್ಕಾರ ರಚನೆ, ಅಧಿಕಾರ ಹಂಚಿಕೆ ಸೂತ್ರ ಕುರಿತಂತೆ ಹಂಗಾಮಿ ಸಿಎಂ ಏಕನಾಥ್ ಶಿಂಧೆ ಹಾಗೂ ಮಾಜಿ ಡಿಸಿಎಂ ದೇವೇಂದ್ರ ಫಡ್ನವಿಸ್ ನಡುವೆ ಮಂಗಳವಾರ ಸಂಜೆ ನಡೆದ ಮಾತುಕತೆಯಲ್ಲಿ ಬಿಕ್ಕಟ್ಟು ಇತ್ಯರ್ಥಗೊಂಡಿತ್ತು.
ಡಿಸೆಂಬರ್ 5 ರಂದು ಹೊಸ ಸರ್ಕಾರದ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಮುಂಬಯಿನ ಆಜಾದ್ ಮೈದಾನದಲ್ಲಿ ಸಿದ್ಧತೆಗಳು ಭರದಿಂದ ಸಾಗಿವೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ 2 ಸಾವಿರ ಗಣ್ಯರು, 40 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ.















Comments