ಮಹಾರಾಷ್ಟ್ರದಲ್ಲಿ ಭಾಷಾ ತುರ್ತು ಪರಿಸ್ಥಿತಿ ಇದೆ
- Ananthamurthy m Hegde
- Jun 26
- 1 min read

ಮುಂಬೈ: ದೇಶದಾದ್ಯಂತ ಭಾಷಾ ವಿವಾದಗಳು ಆಗಾಗಾ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿರುತ್ತದೆ. ಅಂತಹದ್ದೇ ಒಂದು ವಿವಾದ ಮಹಾರಾಷ್ಟ್ರ ಸರ್ಕಾರದ ನಿರ್ಧಾರದಿಂದ ಉದ್ಭವವಾಗಿದೆ. ಮಹಾರಾಷ್ಟ್ರದ ಶಾಲೆಗಳಲ್ಲಿ ತ್ರಿಭಾಷಾ ಸೂತ್ರವನ್ನು ಅಳವಡಿಸಿರುವ ದೇವೆಂದ್ರ ಫಡ್ನವಿಸ್ ಸರ್ಕಾರದ ನಿರ್ಧಾರವನ್ನ ಟೀಕಿಸಿರುವ ಶಿವಸೇನೆಯ ಉದ್ಧವ್ ಠಾಕ್ರೆ ಬಣ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು, ಬಿಜೆಪಿಯು ಮಹಾರಾಷ್ಟ್ರದಲ್ಲಿ ಭಾಷಾ ತುರ್ತು ಪರಿಸ್ಥಿತಿಯನ್ನು ಘೋಷಿಸಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿದರು.
ಮುಂಬೈನಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹಾಗೂ ಶಿವಸೇನೆ (ಉದ್ಧವ್ ಠಾಕ್ರೆ ಬಣ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು, ರಾಜ್ಯದಲ್ಲಿ ತ್ರಿಭಾಷಾ ಸೂತ್ರವನ್ನು ಜಾರಿಗೊಳಿಸಲು ಯಾವುದೇ ತಹದ ಪ್ರಯತ್ನ ನಡೆದರೆ, ದೊಡ್ಡ ಪ್ರಮಾಣದ ಸಾಮೂಹಿಕ ಚಳವಳಿಯನ್ನು ಆರಂಭಿಸುವುದಾಗಿ ಎಚ್ಚರಿಕೆ ನೀಡಿದ್ದರು. ಜೊತೆಗೆ, ಮಹಾರಾಷ್ಟ್ರದ ಶಾಲೆಗಳಲ್ಲಿ ಮೂರು ಭಾಷೆಗಳ ಅಗತ್ಯವಿಲ್ಲ ಎಂದು ಠಾಕ್ರೆ, ಈ ನಿರ್ಧಾರವನ್ನು ಹಿಂತೆಗೆದುಕೊಳ್ಳದಿದ್ದರೆ, ದೊಡ್ಡ ಮಟ್ಟದಲ್ಲಿ ಚಳವಳಿ ಸಂಘಟಿಸುವುದಾಗಿ ಘೋಷಿಸಿದರು.















Comments