top of page

ಮಹಿಳೆಯರಿಗೆ ಬಿಗ್ ಶಾಕ್ : 'ಶಕ್ತಿ ಯೋಜನೆ' ಪರಿಷ್ಕರಣೆ?

  • Writer: Ananthamurthy m Hegde
    Ananthamurthy m Hegde
  • Oct 30, 2024
  • 1 min read


ree

ಬೆಂಗಳೂರು : ರಾಜ್ಯದ ಮಹಿಳೆಯರಿಗೆ ಬಿಗ್ ಶಾಕ್ ಎದುರಾಗಿದ್ದು, ಉಚಿತ ಪ್ರಯಾಣಕ್ಕೆ ಬ್ರೇಕ್ ಬೀಳಲಿದ್ಯಾ ಎಂಬ ಅನುಮಾನ ಕಾಡುತ್ತಿದೆ.

ಈ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಸುಳಿವು ನೀಡಿದ್ದಾರೆ. ಶಕ್ತಿ ಯೋಜನೆ ಪರಿಷ್ಕರಣೆ ಆಗುವ ಕುರಿತು ಡಿಸಿಎಂ ಡಿಕೆಶಿ ಸುಳಿವು ನೀಡಿದ್ದಾರೆ. ವಿಧಾನಸೌಧದ ಬಳಿ ಬುಧವಾರ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ೨೦ ನೂತನ ವೋಲ್ವೋ ಐರಾವತ ಕ್ಲಬ್ ಕ್ಲಾಸ್ ೨.೦ ವಾಹನಗಳಿಗೆ ಚಾಲನೆ ನೀಡಿದ ಬಳಿಕ ಅವರು ಮಾತನಾಡಿದರು.

ರಾಜ್ಯ ಸಾರಿಗೆ ಸಂಸ್ಥೆಯು ಖಾಸಗಿ ಸಂಸ್ಥೆಗಳನ್ನೂ ಮೀರಿಸಬಲ್ಲ ಗುಣಮಟ್ಟದ ಸೇವೆಗಳನ್ನು ನೀಡುತ್ತಿದೆ. ನಾವು ಶಕ್ತಿ ಯೋಜನೆಯ ಮೂಲಕ ಹೆಣ್ಣುಮಕ್ಕಳು ಉಚಿತವಾಗಿ ಬಸ್ಸಿನಲ್ಲಿ ಪ್ರಯಾಣ ಮಾಡುವ ಅವಕಾಶ ಕಲ್ಪಿಸಿದೆವು. ಹಣಕಾಸಿನ ಪರಿಸ್ಥಿತಿ ಚೆನ್ನಾಗಿರುವ ಕೆಲವು ಮಹಿಳೆಯರು ನನ್ನನ್ನು ಟ್ಯಾಗ್ ಮಾಡಿ ಟ್ವೀಟ್ ಮಾಡಿದ್ದು, ತಾವು ಹಣ ಕೊಟ್ಟು ಪ್ರಯಾಣ ಮಾಡಲು ಬಯಸಿದರೂ ಕಂಡಕ್ಟರ್‌ಗಳು ಸ್ವೀಕರಿಸುತ್ತಿಲ್ಲ ಎಂದು ಹೇಳುತ್ತಿದ್ದಾರೆ. ನಮಗೆ ಉಚಿತ ಪ್ರಯಾಣ ಬೇಡ ಎಂದಿದ್ದಾರೆ. ಈ ಕುರಿತು ಸಚಿವ ರಾಮಲಿಂಗಾ ರೆಡ್ಡಿ ಜೊತೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.

Comments


Top Stories

bottom of page