top of page

ಯುದ್ಧದ ಬಿಸಿಗೆ ಬೆದರಿ ಸಾಮೂಹಿಕ ರಾಜೀನಾಮೆ ನೀಡುತ್ತಿದ್ದಾರೆ ಪಾಕ್‌ ಸೈನಿಕರು!

  • Writer: Ananthamurthy m Hegde
    Ananthamurthy m Hegde
  • Apr 28
  • 1 min read

ಇಸ್ಲಾಮಾಬಾದ್‌: ಭಾರತದ (India) ವಿರುದ್ಧ ಯುದ್ಧಕ್ಕೆ ತಯಾರಾದಂತೆ ಪೋಸ್‌ ನೀಡುತ್ತಿರುವ ಪಾಕಿಸ್ತಾನಕ್ಕೆ (Pakistan) ಅಲ್ಲಿನ ಸೈನಿಕರೇ ಶಾಕ್‌ ನೀಡುತ್ತಿದ್ದಾರೆ. ಹಲವು ಸೈನಿಕರು, ಸೇನಾ ಅಧಿಕಾರಿಗಳು ರಾಜೀನಾಮೆ ನೀಡುತ್ತಿದ್ದಾರೆ ಎಂದು ವರದಿಯಾಗಿದೆ.


ಕೇವಲ ಎರಡು ದಿನಗಳಲ್ಲಿ ಸುಮಾರು 5,000 ಅಧಿಕಾರಿಗಳು ಮತ್ತು ಸೈನಿಕರು ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ. ಭಾರತವು ಯಾವುದೇ ಕ್ಷಣದಲ್ಲಿ ಪ್ರಬಲ ಮಿಲಿಟರಿ ಕಾರ್ಯಾಚರಣೆಯನ್ನು ಪ್ರಾರಂಭಿಸಬಹುದು ಎಂಬ ಭಯದಿಂದ ಪಾಕಿಸ್ತಾನಿ ಸೈನಿಕರ ಕುಟುಂಬಗಳು ಉದ್ಯೋಗಕ್ಕೆ ರಾಜೀನಾಮೆ ನೀಡುವಂತೆ ಒತ್ತಾಯಿಸುತ್ತಿವೆ.

ಕೆಲವು ಸೈನಿಕರು ತಮ್ಮ ಸುರಕ್ಷತೆಯ ಬಗ್ಗೆ ಭಯಗೊಂಡು ಕರ್ತವ್ಯದಿಂದ ಹಿಂದೆ ಸರಿಯುತ್ತಿದ್ದಾರೆ. ಈಗಾಲೇ ಕೆಲವರು ರಾಜೀನಾಮೆ ನೀಡಿದ್ದು ಮುಂದಿನ ದಿನಗಳಲ್ಲಿ ಮತ್ತಷ್ಟು ಸಂಖ್ಯೆಯಲ್ಲಿ ಸೈನಿಕರು ರಾಜೀನಾಮೆ ನೀಡಲಿದ್ದಾರೆ ಎಂದು ವರದಿಯಾಗಿದೆ. 

ರಾಜೀನಾಮೆ ನೀಡುವವರ ಸಂಖ್ಯೆ ಜಾಸ್ತಿಯಾಗುತ್ತಿದ್ದಂತೆ ಪಾಕ್‌ ಸೇನೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದೆ. ಸೇನೆಯ ನಿಯಮವನ್ನು ಉಲ್ಲಂಘಿಸಿದರೆ ಅವರ ವಿರುದ್ಧ ಪಾಕಿಸ್ತಾನ ಸೇನಾ ಕಾಯ್ದೆ(1952) ಅಡಿ ಕ್ರಮ ಜರುಗಿಸಲಾಗುವುದು ಎಂದು ವಾರ್ನಿಂಗ್‌ ನೀಡಿದ ಆದೇಶ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಆರ್ಥಿಕವಾಗಿ ಈಗಾಗಲೇ ತತ್ತರಿಸಿ ಹೋಗಿರುವ ಪಾಕಿಸ್ತಾನದ ಮೇಲೆ ಒಂದು ಕಡೆಯಿಂದ ಬಲೂಚಿಸ್ತಾನದ ಪ್ರತ್ಯೇಕತಾವಾದಿಗಳು ಮತ್ತೊಂದು ಕಡೆಯಿಂದ ತಾಲಿಬಾನ್‌ ಕಡೆಯಿಂದ ದಾಳಿ ನಡೆಯುತ್ತಿದೆ.

ಬಲೂಚಿಸ್ತಾನ, ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ – ಬಲೂಚಿಸ್ತಾನ ಲಿಬರೇಷನ್ ಆರ್ಮಿ ಬಂಡುಕೋರರು ಸೇನೆಯನ್ನು ಗುರಿಯಾಗಿಸಿಕೊಂಡು ನಿರಂತರ ದಾಳಿ ನಡೆಸುತ್ತಲೇ ಇದ್ದಾರೆ. ಈ ದಾಳಿಗಳಿಂದ ಭಾರೀ ಸಂಖ್ಯೆಯಲ್ಲಿ ಸೈನಿಕರು ಮೃತಪಟ್ಟಿರುವುದು ರಾಜೀನಾಮೆ ನೀಡಲು ಮತ್ತೊಂದು ಕಾರಣ ಎನ್ನಲಾಗಿದೆ.

ಮಾ.16ರಂದು ಪಾಕ್ ಸೇನಾ ವಾಹನವನ್ನು ಗುರಿಯಾಗಿಸಿಕೊಂಡು ಬಲೂಚಿಸ್ತಾನ್ ಲಿಬರೇಷನ್ ಆರ್ಮಿ‌ (BLA) ಪುಲ್ವಾಮಾ ಮಾದರಿಯ ಆತ್ಮಾಹುತಿ ದಾಳಿ ನಡೆಸಿತ್ತು. ಈ ದಾಳಿಯಲ್ಲಿ 90 ಸೈನಿಕರನ್ನು ಹತ್ಯೆ ಮಾಡಿದ್ದೇವೆ ಎಂದು ಬಿಎಲ್‌ಎ ಹೇಳಿಕೊಂಡಿತ್ತು. ಪಾಕಿಸ್ತಾನದಲ್ಲಿ ಭದ್ರತಾ ವ್ಯವಸ್ಥೆ ಬಹಳ ಕಳಪೆಯಾಗಿದೆ. ಇದಕ್ಕಾಗಿ ಸೇನೆ ತೊರೆಯುತ್ತಿರುವ ಯೋಧರು ತಮ್ಮ ಜೀವ ಕಳೆದುಕೊಳ್ಳುವ ಬದಲಿಗೆ ಸೇನೆ ತೊರೆದು ವಿದೇಶಗಳಲ್ಲಿ ಉದ್ಯೋಗಕ್ಕೆ ವಲಸೆ ಹೋಗುತ್ತಿದ್ದಾರೆ ಎಂದು ವರದಿಯಾಗಿದೆ.

Comments


Top Stories

bottom of page