top of page

ರಾಗಿಗುಡ್ಡದಲ್ಲಿ ಅನ್ಯಕೋಮಿನ ಯುವಕರ ದುಷ್ಕೃತ್ಯ; ಗಣಪತಿ, ನಾಗರ ಮೂರ್ತಿಗೆ ಕಾಲಿಂದ ಒದ್ದು ವಿಕೃತಿ..!

  • Writer: Ananthamurthy m Hegde
    Ananthamurthy m Hegde
  • Jul 6
  • 1 min read
ree

ಶಿವಮೊಗ್ಗ: ಶಿವಮೊಗ್ಗದಲ್ಲಿ ಒಂದಷ್ಟು ದಿನಗಳ ಕಾಲ ಕಿಡಿಗೇಡಿತನದ ಕೃತ್ಯಗಳಿಗೆ ವಿರಾಮ ಹಾಡಿದ್ದ ಹಿಂದೂ ವಿರೋಧಿಗಳು, ಮತ್ತೆ ಕುಕೃತ್ಯ ಆರಂಭಿಸಿದ್ದಾರೆ.

ಶಿವಮೊಗ್ಗದ ರಾಗಿಗುಡ್ಡದಲ್ಲಿನ ನಾಗರ ಕಟ್ಟೆಯ ಮೇಲಿದ್ದ ಗಣಪತಿ ಹಾಗೂ ಶೇಷನಾಗ ವಿಗ್ರಹಗಳನ್ನು ವಿರೂಪಗೊಳಿಸಿ ಕಾಲಿನಿಂದ ಒದ್ದು ಚರಂಡಿಗೆ ಎಸೆದು ದಾಷ್ಟ್ಯತನ ಮೆರೆದಿದ್ದಾರೆ.

ರಾಗಿಗುಡ್ಡದ ಬಂಗಾರಪ್ಪ ಬಡಾವಣೆಯ ಮುಖ್ಯರಸ್ತೆಯಲ್ಲಿ ಇತ್ತೀಚೆಗೆ ಪ್ರತಿಷ್ಠಾಪನೆ ಮಾಡಿದ್ದ ಗಣಪತಿ, ಶೇಷ ನಾಗ ವಿಗ್ರಹಕ್ಕೆ ಒದ್ದು, ನಾಗರ ಕಲ್ಲನ್ನು ಚರಂಡಿಗೆ ಎಸೆದಿರುವ ಆರೋಪ ಕೇಳಿಬಂದಿದೆ.

ಅನ್ಯಕೋಮಿನ ಯುವಕರಿಂದ ದುಷ್ಕೃತ್ಯ ನಡೆದಿದೆ ಎನ್ನಲಾಗಿದ್ದು, ಘಟನೆ ಬೆನ್ನಲ್ಲೇ ಹಿಂದೂ ಮುಖಂಡರು ಕೆರಳಿದ್ದಾರೆ. ಪರಿಣಾಮ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಹಿಂದೂ ದೇವರುಗಳಿಗೆ ಅವಮಾನ ಮಾಡಿದ್ದಾರೆ ಎಂದು ಸ್ಥಳೀಯರ ಆಕ್ರೋಶ ಹೊರಹಾಕಿದ್ದು, ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಎಸ್ಪಿ ಜಿ.ಕೆ ಮಿಥುನ್ ಕುಮಾರ್, ಶಿವಮೊಗ್ಗ ಸಬ್ ಡಿವಿಜನ್-2 ಡಿವೈಎಸ್ಪಿ ಸಂಜೀವ್ ಕುಮಾರ್ ದೌಡಾಯಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ.

ಸ್ಥಳೀಯರ ಜೊತೆ ಮಾತುಕತೆ ನಡೆಸಿ ಅಧಿಕಾರಿಗಳು, ದೂರು ನೀಡುವಂತೆ ಮನವಿ ಮಾಡಿದ್ದಾರೆ. ದೂರು ನೀಡಿ ತಪ್ಪಿತಸ್ಥರನ್ನು ಬಂಧಿಸುತ್ತೇವೆಂದು ಭರವಸೆ ನೀಡಿದ್ದಾರೆ.

ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸ್ಥಳದಲ್ಲಿ ಬಿಗಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ.

Comments


Top Stories

bottom of page