ರಾಜ್ಯ ಬಿಜೆಪಿಯಲ್ಲಿ ನಾಯಕತ್ವದ ಬದಲಾವಣೆ ಚರ್ಚೆ
- Ananthamurthy m Hegde
- Jun 26
- 1 min read

ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ ಅಧ್ಯಕ್ಷರ ಬದಲಾವಣೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ವಿಪಕ್ಷ ನಾಯಕ ಆರ್. ಅಶೋಕ್ ಅವರ ನಾಯಕತ್ವದ ಬದಲಾವಣೆ ಕುರಿತಾದ ಚರ್ಚೆಗಳು ತೀವ್ರಗೊಂಡಿರುವ ಬೆನ್ನಲ್ಲೇ, ಪಕ್ಷದ ರೆಬೆಲ್ ಗುಂಪು ಮತ್ತೊಮ್ಮೆ ಆ್ಯಕ್ಟಿವ್ ಆಗಿದೆ. ಸಾಲು ಸಾಲು ಸಭೆ ನಡೆಸಲು ಮುಂದಾಗಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷರ ಪಟ್ಟದ ಮೇಲೆ ಮೊದಲಿನಿಂದಲೂ ತುಂಬಾ ಜನರಿಗೆ ಕಣ್ಣಿದೆ. ಅದರಲ್ಲೂ ರೆಬೆಲ್ಸ್ ಟೀಂ ಕುಟುಂಬ ರಾಜಕೀಯ ಅಂತ ವಾಗ್ದಾಳಿ ಮಾಡಿ, ವಿಜಯೇಂದ್ರರನ್ನು ಕೆಳಗಿಳಸಬೇಕೆಂದು ಭಾರಿ ಕಸರತ್ತು ನಡೆಸುತ್ತಿವೆ. ಇದೀಗ ಮತ್ತೊಮ್ಮೆ ಅದಕ್ಕೆ ಪುಷ್ಠಿ ನೀಡಿದಂತಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಅವರನ್ನು ಕೆಳಗಿಳಿಸಿ, ಹೊಸ ನಾಯಕನನ್ನು ಆಯ್ಕೆ ಮಾಡಲು ರೆಬೆಲ್ ಗುಂಪು ತಂತ್ರಗಾರಿಕೆಯನ್ನು ರೂಪಿಸುತ್ತಿದೆ. ಈ ಸಂಬಂಧ ಬೆಂಗಳೂರಿನ ಮಾಜಿ ಸಂಸದ ಜಿ.ಎಂ. ಸಿದ್ದೇಶ್ವರ್ ಅವರ ನಿವಾಸದಲ್ಲಿ ರೆಬೆಲ್ ನಾಯಕರ ಸಭೆ ನಡೆದಿದ್ದು, ರಮೇಶ್ ಜಾರಕಿಹೊಳಿ, ಕುಮಾರ್ ಬಂಗಾರಪ್ಪ, ಅರವಿಂದ್ ಲಿಂಬಾವಳಿ ಸೇರಿದಂತೆ ಹಲವು ಪ್ರಮುಖರು ಭಾಗವಹಿಸಿದ್ದಾರೆ.















Comments