ರಾಜ್ಯದ ಹಲವು ಜಿಲ್ಲೆಗಳಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತರಿಂದ ದಾಳಿ
- Ananthamurthy m Hegde
- May 31
- 1 min read

ಶನಿವಾರ ಬೆಳ್ಳಂಬೆಳಗ್ಗೆ ರಾಜ್ಯದ ಹಲವು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಬಾಗಲಕೋಟೆ, ಗದಗದ ಹುನಗುಂದ, ಹಾವೇರಿ ಸೇರಿ ಹಲವು ಕಡೆ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳಗ್ಗೆಯೇ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಗದಗ ನಿರ್ಮಿತಿ ಕೇಂದ್ರ ಯೋಜನಾ ನಿರ್ದೇಶಕ ಗಂಗಾಧರ್ ಶಿರೋಳ ಅವರ ಮನೆ, ಕಚೇರಿ ಸೇರಿ 6 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಗಂಗಾಧರ್ ಮನೆ, ಕಚೇರಿಗಳ ಮೇಲೆ ಅವರ ಅಳಿಯ, ಭಾವನ ಮನೆ ಸೇರಿ 6 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಎಸ್ ಪಿ ಹಣಮಂತರಾಯ ನೇತೃತ್ವದಲ್ಲಿ ದಾಳಿ ನಡೆದಿದೆ. ಬಳ್ಳಾರಿ ಜಿಲ್ಲೆ ಹೂವಿನಹಡಗಲಿ, ಹಾವೇರಿ ಜಿಲ್ಲೆಯಲ್ಲಿ ಕೂಡ ಲೋಕಾಯುಕ್ತ ದಾಳಿ ನಡೆದಿದೆ.















Comments