top of page

ರಾಜ್ಯದಲ್ಲಿ ಮತ್ತೆ 5 ದಿನಗಳ ಕಾಲ ಭಾರೀ ಮಳೆ

  • Writer: Ananthamurthy m Hegde
    Ananthamurthy m Hegde
  • Dec 27, 2024
  • 1 min read
ree

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ . ಅದಕ್ಕಾಗಿ ಮುಂದಿನ 5 ದಿನಗಳ ಕಾಲ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸಿಲಿಕಾನ್‌ ಸಿಟಿ ಬೆಂಗಳೂರು ಸೇರಿದಂತೆ, ರಾಜ್ಯದ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಕೋಲಾರ, ಹಾಸನ, ತುಮಕೂರು, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ರಾಮನಗರ, ಚಾಮರಾಜನಗರ, ಚಿತ್ರದುರ್ಗದಲ್ಲಿ ಮುಂದಿನ ಐದು ದಿನಗಳ ಕಾಲ ಮಳೆಯಾಗಲಿದೆ. ಇನ್ನು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಬೆಳಗ್ಗೆಯಿಂದಲೇ ಜಿಟಿಜಿಟಿ ಮಳೆ ಪ್ರಾರಂಭವಾಗಿದೆ. ನಗರದಲ್ಲಿ ಇದೇ ರೀತಿಯಾಗಿ ಮೋಡಕವಿದ ವಾತಾವರಣ ಇರುತ್ತದೆ ಎಂದು ಹವಾಮಾನ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

Comments


Top Stories

bottom of page