ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಮಹಾಮಾರಿ
- Ananthamurthy m Hegde
- 8 hours ago
- 1 min read

ಮತ್ತೆ ರಾಜ್ಯದಲ್ಲಿ ಕೊರೊನಾ ಮಹಾಮಾರಿಯ ಆತಂಕ ಹೆಚ್ಚಾಗಿದೆ. ರಾಜ್ಯದಲ್ಲಿ ಕೊವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಕಂಡು ಬರುತ್ತಿದೆ. ಕರ್ನಾಟಕದಲ್ಲಿ ನಿನ್ನೆ ಒಂದೇ ದಿನಲ್ಲೆ ಒಟ್ಟು 35 ಕೊರೊನಾ ಪ್ರಕರಣಗಳು ದಾಖಲಾಗುತ್ತಿದೆ. ಇದರಲ್ಲಿ 32 ಪ್ರಕರಣಗಳು ಬೆಂಗಳೂರಿನಲ್ಲಿ ಪತ್ತೆಯಾಗಿದ್ದು, ಇಂದು ಕೂಡಾ ಸೋಂಕಿತರ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೂವರು ಮಕ್ಕಳು ಸೇರಿದಂತೆ 9 ತಿಂಗಳ ಮಗುವಿಗೆ ಕೊರೊನಾ ವೈರಸ್ ಸೊಂಕು ತಗುಲಿದ್ದು, 9 ತಿಂಗಳ ಮಗುವಿಗೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವಾಣಿವಿಲಾಸ ಆಸ್ಪತ್ರೆಯಲ್ಲಿ ಮಗುವಿಗೆ ಚಿಕಿತ್ಸೆ ಮುಂದುವರಿದಿದ್ದು, ಇಂದು ಕೂಡಾ ಸೋಂಕಿತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಸೋಂಕಿತರ ಸಂಖ್ಯೆ ಹೆಚ್ಚಾದರೆ ರ್‍ಯಾಂಡಮ್ ಟೆಸ್ಟನ್ನು ಹೆಚ್ಚಿಸುವ ಕುರಿತು ಚರ್ಚೆ ನಡೆಯುತ್ತಿದೆ.
Comments