top of page

ರಾತ್ರಿ ವೇಳೆ ಹೆಚ್ಚಾಗುತ್ತಿರುವ ರಸ್ತೆ ಅಪಘಾತ

  • Writer: Ananthamurthy m Hegde
    Ananthamurthy m Hegde
  • Dec 26, 2024
  • 1 min read
ree

ಬೆಂಗಳೂರು: ಐಟಿ ಸಿಟಿ ಬೆಂಗಳುೂರು ನಗರದಲ್ಲಿ ನವೆಂಬರ್ ತಿಂಗಳವರೆಗೆ ಪ್ರತಿದಿನವೆಂಬಂತೆ ಸರಾಸರಿ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಮತ್ತು 11 ಜನರು ಗಾಯಗೊಂಡಿದ್ದಾರೆ. ಈ ಅಪಘಾತಗಳಲ್ಲಿ ಸುಮಾರು ಶೇಕಡಾ 70ರಷ್ಟು ಅಪಘಾತಗಳು ರಾತ್ರಿ ಹೊತ್ತಿನಲ್ಲಿ ಸಂಭವಿಸಿದೆ, ಅತಿಯಾದ ವೇಗ, ರಸ್ತೆ ಸ್ಪಷ್ಟವಾಗಿ ಗೋಚರವಾಗದಿರುವುದು, ಚಾಲನಾ ಕೌಶಲ್ಯದ ಕೊರತೆ ಮತ್ತು ಅಸಮರ್ಪಕ ಮೂಲಸೌಕರ್ಯ ಅಪಘಾತ ಹೆಚ್ಚುತ್ತಿರುವುದಕ್ಕೆ ಕಾರಣ ಎಂದು ತಜ್ಞರು ಹೇಳುತ್ತಾರೆ.

ನವೆಂಬರ್ ಅಂತ್ಯದವರೆಗಿನ ಅಂಕಿಅಂಶಗಳ ಪ್ರಕಾರ, 780 ಮಾರಣಾಂತಿಕ ಅಪಘಾತಗಳು ವರದಿಯಾಗಿದ್ದು, 802 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಅಲ್ಲದೆ, 3,571 ಮಾರಣಾಂತಿಕವಲ್ಲದ ಅಪಘಾತಗಳಲ್ಲಿ 3,685 ಜನರು ಗಾಯಗೊಂಡಿದ್ದಾರೆ. 2023 ರಲ್ಲಿ, 882 ಮಾರಣಾಂತಿಕ ಅಪಘಾತಗಳು ಮತ್ತು 4,092 ಮಾರಣಾಂತಿಕವಲ್ಲದ ಅಪಘಾತಗಳು ವರದಿಯಾಗಿವೆ.

ಈ ವರ್ಷ, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಂಚಾರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಹೆಚ್ಚಿನ ಸಂಖ್ಯೆಯ ಅಪಘಾತಗಳು ನಡೆದಿವೆ, ಇಲ್ಲಿ 224 ಅಪಘಾತಗಳು ದಾಖಲಾಗಿವೆ. ಇದರ ಪರಿಣಾಮವಾಗಿ 53 ಸಾವುಗಳು ಮತ್ತು 230 ಗಾಯಗಳು ಸಂಭವಿಸಿವೆ. ಇದಾದ ನಂತರ ಕೆಆರ್ ಪುರಂ ಸಂಚಾರಿ ಪೊಲೀಸ್ ಠಾಣೆಯಲ್ಲಿ ಅತಿ ಹೆಚ್ಚು 222 ಪ್ರಕರಣಗಳು ವರದಿಯಾಗಿವೆ.

ಉಪ ಪೊಲೀಸ್ ಆಯುಕ್ತ ಶಿವಪ್ರಕಾಶ ದೇವರಾಜು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪ್ರತಿನಿಧಿ ಜೊತೆಗೆ ಮಾತನಾಡಿ, ನಗರದಲ್ಲಿ ರಾತ್ರಿ ವೇಳೆ ಅಪಘಾತಗಳು ಹೆಚ್ಚುತ್ತಿರುವುದು ಆತಂಕಕಾರಿ ವಿಷಯವಾಗಿದೆ. ಶೇಕಡಾ 75 ರಿಂದ 80 ರಷ್ಟು ಮಾರಣಾಂತಿಕ ಮತ್ತು ಮಾರಣಾಂತಿಕವಲ್ಲದ ಅಪಘಾತಗಳು ಸಂಜೆ 6 ರಿಂದ ಬೆಳಗ್ಗೆ 6 ರವರೆಗೆ ಸಂಭವಿಸುತ್ತವೆ.

ಪಾದಚಾರಿಗಳು ಮತ್ತು ದ್ವಿಚಕ್ರ ವಾಹನ ಸವಾರರು ಹೆಚ್ಚು ತೊಂದರೆ ಅನುಭವಿಸುವಂತಾಗಿದೆ. ರಾತ್ರಿಯಲ್ಲಿ ಕಳಪೆ ಗೋಚರತೆ ಮತ್ತು ಅತಿವೇಗವು ಪಾದಚಾರಿಗಳು ಮತ್ತು ಇತರ ಅಡೆತಡೆಗಳನ್ನು ಗುರುತಿಸಲು ಪ್ರಯಾಣಿಕರಿಗೆ ಕಷ್ಟಕರವಾಗಿಸುತ್ತದೆ, ಇದು ಮಾರಣಾಂತಿಕ ಅಪಘಾತಕ್ಕೆ ಕಾರಣವಾಗುತ್ತದೆ. ರಾತ್ರಿ ಹೊತ್ತಿನಲ್ಲಿ ಸಂಭವಿಸುವ ಹೆಚ್ಚಿನ ಅಪಘಾತಗಳು ಸ್ವಯಂಕೃತ ತಪ್ಪಿನಿಂದಾಗಿರುತ್ತವೆ. ಆಗಾಗ್ಗೆ ಮಿತಿಮೀರಿದ ವೇಗ ಮತ್ತು ಮದ್ಯದ ಅಮಲಿನಲ್ಲಿ ಚಾಲನೆ ಮಾಡುವುದರಿಂದಾಗುತ್ತವೆ ಎಂದರು.


Comments


Top Stories

bottom of page