top of page

ವೇದಿಕೆ ಮೇಲೆ ಸಿಎಂ ಸಿದ್ದರಾಮಯ್ಯರಿಂದ ಅಪಮಾನ; ಸ್ವಯಂನಿವೃತ್ತಿಗೆ ಮುಂದಾದ ASP

  • Writer: Ananthamurthy m Hegde
    Ananthamurthy m Hegde
  • Jul 2
  • 1 min read
ree

ಧಾರವಾಡ: ಬೆಳಗಾವಿಯಲ್ಲಿ ನಡೆದಿದ್ದ ಕಾಂಗ್ರೆಸ್‌ ಕಾರ್ಯಕ್ರಮದಲ್ಲಿ ವೇದಿಕೆ ಮೇಲೆ ಹಿರಿಯ ಪೊಲೀಸ್ ಅಧಿಕಾರಿ ಮೇಲೆ ಸಿಎಂ ಸಿದ್ದರಾಮಯ್ಯ ಕೈ ಎತ್ತಿದ್ದರು. ಸಾರ್ವಜನಿಕವಾಗಿ ಈ ಅನಿರೀಕ್ಷಿತ ನಡೆಯಿಂದ ಅವಮಾನಕ್ಕೀಡಾಗಿದ್ದ ಧಾರವಾಡ ಎಎಸ್‌ಪಿ ನಾರಾಯಣ ಭರಮನಿ ಅವರು ಸ್ವಯಂ ಘೋಷಿತ ರಾಜೀನಾಮೆಗೆ ಮುಂದಾಗಿದ್ದಾರೆ. ನಾರಾಯಣ ಭರಮನಿ ಅವರು ಅದಾಗಲೇ ರಾಜೀನಾಮೆಗೆ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದ್ದು, ಅವರ ಮನವೊಲಿಸುವ ಪ್ರಯತ್ನಗಳನ್ನು ಪೊಲೀಸ್ ಇಲಾಖೆ ಹಿರಿಯ ಅಧಿಕಾರಿಗಳು ನಡೆಸುತ್ತಿದ್ದಾರೆ.

ಬೆಳಗಾವಿಯಲ್ಲಿ ನಡೆದಿದ್ದ ಕಾಂಗ್ರೆಸ್ ಪ್ರತಿಭಟನಾ ಸಭೆ ವೇಳೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರಿಂದ ಕೋಪಗೊಂಡಿದ್ದ ಸಿದ್ದರಾಮಯ್ಯ ಕರ್ತವ್ಯದಲ್ಲಿದ್ದ ನಾರಾಯಣ ಭರಮನಿ ಅವರನ್ನು ವೇದಿಕೆಗೆ ಕರೆದು ಹೊಡೆಯಲು ಕೈ ಎತ್ತಿದ್ದು ವಿವಾದಕ್ಕೆ ಕಾರಣವಾಗಿತ್ತು. ಅಲ್ಲದೆ ಸಿದ್ದರಾಮಯ್ಯ ನಡೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ನಾರಾಯಣ ಭರಮನಿ ಅವರು 1994ರ ಬ್ಯಾಚ್‌ನ ಪೊಲೀಸ್ ಅಧಿಕಾರಿಯಾಗಿದ್ದ 2007ರಲ್ಲಿ ನಡೆದ ಕುಖ್ಯಾತ ರೌಡಿ ಪ್ರವೀಣ್ ಶಿಂತ್ರೆ ಎನ್‌ಕೌಂಟರ್ ನ ನೇತೃತ್ವ ವಹಿಸಿದ್ದರು.


Comments


Top Stories

bottom of page