top of page

ವಿದ್ಯಾರ್ಥಿಗಳು ಕಾನೂನು ಬಾಹಿರ ಚಟುವಟಿಕೆಯಲ್ಲಿ ಭಾಗಿಯಾಗುತ್ತಿರುವುದು ಆತಂಕಕಾರಿ

  • Writer: Ananthamurthy m Hegde
    Ananthamurthy m Hegde
  • Dec 21, 2024
  • 1 min read

ಕುಮಟಾ: ಇಂದಿನ ಶೈಕ್ಷಣಿಕ ವ್ಯವಸ್ಥೆಯಲ್ಲಿ ಅನೇಕ ವಿದ್ಯಾರ್ಥಿಗಳು ಅನೈತಿಕವಾದ ಕಾನೂನು ಬಾಹಿರವಾದ ಚಟುವಟಿಕೆಗಳಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳುತ್ತಿರುವುದು ಕೊಲೆ ಸುಲಿಗೆ ದರೋಡೆ ಅಂತಹ ಪ್ರಕರಣಗಳಲ್ಲಿ ಭಾಗಿಯಾಗುತ್ತಿರುವುದು ಅತ್ಯಂತ ಆತಂಕಕಾರಿ ಬೆಳವಣಿಯಾಗಿದೆ. ರಸ್ತೆ ನಿಯಮವನ್ನು ಸರಿಯಾಗಿ ಪಾಲಿಸದೆ ವಾಹನ ಪರವಾನಿಗಿ ಇಲ್ಲದೆ ಅನೇಕ ವಿದ್ಯಾರ್ಥಿಗಳು ವಾಹನ ಚಲಾಯಿಸುತ್ತಿದ್ದು ಅಪಘಾತಕ್ಕೆ ಒಳಗಾಗುತ್ತಿದ್ದಾರೆ. ಇದರಿಂದ ಹಲವಾರು ಪ್ರಾಣ ಹಾನಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಇದು ಹೀಗೆ ಮುಂದುವರೆದರೆ ಅಪಾಯ ಕಟ್ಟಿಟ್ಟ ಬುತ್ತಿ. ಇದರಿಂದ ಇಂದು ವಿದ್ಯಾರ್ಥಿಗಳಲ್ಲಿ ಮಾದಕ ದ್ರವ್ಯಗಳ ಸೇವನೆ ಸಂಖ್ಯೆ ಹೆಚ್ಚಾಗುತ್ತಿದ್ದು ಇದರಿಂದ ನಾನಾ ರೀತಿಯ ಅವಾಂತರಗಳು ಸೃಷ್ಟಿಯಾಗುತ್ತಿವೆ. ಇದರಿಂದ ಸಾಮಾಜಿಕ ಸ್ವಾಸ್ಥ್ಯ ಹಾಳಾಗುತ್ತಿದೆ. ಹೀಗಾಗಿ ವಿದ್ಯಾರ್ಥಿಗಳು ಕೂಡಲೇ ಎಚ್ಚೆತ್ತುಕೊಂಡು ಇವೆಲ್ಲ ದುಶ್ಚಟಗಳಿಂದ, ಕೆಟ್ಟ ಹವ್ಯಾಸಗಳಿಂದ ಹೊರಬಂದು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು. ಹಾಗೂ ಈ ನೆಲದ ಕಾನೂನನ್ನು ಎಲ್ಲರೂ ಅರಿತುಕೊಂಡು ಗೌರವಿಸಬೇಕು ಎಂದು ಕರೆ ನೀಡಿದರು. ಪಟ್ಟಣದ ಬಾಳಿಗಾ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಹಾಗೂ ಪೊಲೀಸ್ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಮಾದಕ ವ್ಯಸನ ರಸ್ತೆ ಸುರಕ್ಷತೆ ಹಾಗೂ ಸೈಬರ್ ಕ್ರೈಂ ಕುರಿತಾದ ಮಾಹಿತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಶಾಲಾ ಕಾಲೇಜುಗಳಲ್ಲಿ ಈ ಕುರಿತು ಗಂಭೀರ ಚಿಂತನೆ ನಡೆಸಬೇಕು ಪಾಲಕರು ಶಿಕ್ಷಕರು ಹಾಗೂ ಸಾರ್ವಜನಿಕರು ಒಟ್ಟಾಗಿ ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗೆ ಶ್ರಮಿಸಬೇಕು. ಉತ್ತಮ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದರು. ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮಂಜುನಾಥ್ ಗೌಡ ಸೈಬರ್ ಕ್ರೈಂ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಪ್ರಾಚಾರ್ಯೆ ರೇವತಿ ಅಧ್ಯಕ್ಷತೆ ವಹಿಸಿದ್ದರು. ಯೂನಿಯನ್ ಕಾರ್ಯದರ್ಶಿ ಡಾ.ಅರವಿಂದ್ ನಾಯಕ್ ಸ್ವಾಗತಿಸಿ ಪರಿಚಯಿಸಿದರು. ಎನ್ಎಸ್ಎಸ್ ಕಾರ್ಯಕ್ರಮ ಅಧಿಕಾರಿ ಡಾ ಮಂಜುನಾಥ ವಿವರಣೆಕರ್ ವಂದಿಸಿದರು.

Comentários


Top Stories

bottom of page