ವಕ್ಫ್ ಬೋರ್ಡ್ ವಿರುದ್ಧ ಬಿಜೆಪಿಗರ ಪ್ರತಿಭಟನೆ
- Ananthamurthy m Hegde
- Nov 4, 2024
- 1 min read

ಕಾರವಾರ: ರೈತರಿಗೆ ವಕ್ಫ್ ಬೋರ್ಡ್ ನೋಟೀಸ್ ಹಿನ್ನಲೆಯಲ್ಲಿ ಇಂದು ಉತ್ತರ ಕನ್ನಡ ಜಿಲ್ಲಾ ಬಿಜೆಪಿಯಿಂದ ಜಿಲ್ಲೆಯಾದ್ಯಂತ ಪ್ರತಿಭಟನೆ ನಡೆಸಲಾಯಿತು. ಭಟ್ಕಳ ,ಹೊನ್ನಾವರ ತಹಸೀಲ್ದಾರ್ ಕಚೇರಿಯಲ್ಲಿ ಬಿಜೆಪಿಗರು ಪ್ರತಿಭಟನೆ ನಡೆಸಿದರೆ ಕಾರವಾರದಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ನಾಯಕರು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಸರ್ಕಾರದ ನೀತಿಯನ್ನು ಖಂಡಿಸಿದ ಪ್ರತಿಭಟನಾಗಾರರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಮುಸ್ಲಿಂ ಓಲೈಕೆ ರಾಜಕಾರಣವನ್ನು ಕಾಂಗ್ರೆಸ್ ಮಾಡುತ್ತಿದೆ, ರೈತರಿಗೆ ಅನ್ಯಾಯ ಮಾಡುತ್ತಿದೆ ಎಂದು ಪ್ರತಿಭಟನಾಗಾರರು ಅಕ್ರೋಶ ವ್ಯಕ್ತಪಡಿಸಿದರು.
Comments