ಸಿಇಟಿ ಫಲಿತಾಂಶ ಪ್ರಕಟ; ಇಂಜಿನಿಯರಿಂಗ್ ವಿಭಾಗದಲ್ಲಿ ಮೊದಲ ಸ್ಥಾನ ಪಡೆದ ಭವೇಶ್ ಜಯಂತಿ
- Ananthamurthy m Hegde
- 8 hours ago
- 1 min read

2025-26ನೇ ಸಾಲಿನ ಸಿಇಟಿ ಫಲಿತಾಂಶ ಇಂದು ಬೆಳಿಗ್ಗೆ ೧೧.೩೦ ಕ್ಕೆ ಪ್ರಕಟ ಮಾಡಲಾಗಿದೆ. ಇದರಲ್ಲಿ ಇಂಜಿನಿಯರಿಂಗ್ ವಿಭಾಗದಲ್ಲಿ ಭವೇಶ್ ಜಯಂತಿ ಎಂಬ ವಿದ್ಯಾರ್ಥಿ ಮೊದಲ ಸ್ಥಾನ ಪಡೆದಿದ್ದಾನೆ. ಈ ವರ್ಷ ನಕಲಿ ಅಭ್ಯರ್ಥಿಗಳ ಹಾವಳಿಗೆ ಬ್ರೇಕ್ ಹಾಕಲು ಹಲವಾರು ಕ್ರಮಗಳನ್ನು ತೆಗೆದುಕೊಳ್ಳಲಾಗಿತ್ತು. ಈ ವರ್ಷ 3,11,991 ಅಭ್ಯರ್ಥಿಗಳು ಪರೀಕ್ಷೆಯನ್ನು ಬರೆದಿದ್ದರು. ಇದರಲ್ಲಿ ಇಂಜಿನಿಯರಿಂಗ್ ವಿಭಾಗದಲ್ಲಿ ಭವೇಶ್ ಜಯಂತಿ ಫಸ್ಟ್ ರ್ಯಾಂಕ್ ಪಡೆದಿದ್ದಾರೆ. ಇಂಜಿನಿಯರಿಂಗ್ ವಿಭಾಗದಲ್ಲಿ ಭವೇಶ್ ಜಯಂತಿ 98.67% ಪಡೆದು ಫಸ್ಟ್ ರ್ಯಾಂಕ್ ಪಡೆದಿದ್ದಾರೆ.
ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಶಿಕ್ಷಣ ಕೋರ್ಸ್ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ್ದ ಸಿಇಟಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟಣೆಗೊಂಡಿದೆ.
Commentaires