ಸಿದ್ದಾಪುರದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಭೀಮಣ್ಣ ನಾಯ್ಕ್
- Ananthamurthy m Hegde
- 7 hours ago
- 1 min read

ಸಿದ್ದಾಪುರ: ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕರಾದ ಭೀಮಣ್ಣ ನಾಯ್ಕ ಶನಿವಾರ ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದರು.
ಬೇಡ್ಕಣಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬೇಡ್ಕಣಿ ಶನೇಶ್ವರ ದೇವಸ್ಥಾನದ ಕೆರೆ ಎರಿಯಿಂದ ಠಾಣೆಗೇರಿವರೆಗಿನ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಸಮಯದ ಮಿತಿಯೊಳಗೆ ಕೆಲಸ ಮುಗಿಸುವಂತೆ ಸೂಚಿಸಿದರು. ನಂತರ ಕೋಲಶಿರ್ಸಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಅವರಗುಪ್ಪ ಸರ್ಕಾರಿ ಡಿಪ್ಲೊಮಾ ಕಾಲೇಜು ಹತ್ತಿರದ ರಸ್ತೆ ಕಾಮಗಾರಿಗೆ ಶಿಲನ್ಯಾಸ ನೆರವೇರಿಸಿದರು. ತದನಂತರ ಅವರಗುಪ್ಪದ ಲಕ್ಷ್ಮೀ ನಗರದ ರಸ್ತೆ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಗುಣಮಟ್ಟದ ರಸ್ತೆ ನಿರ್ಮಿಸವಂತೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಸ್ಥಳೀಯ ಗ್ರಾಮ ಪಂಚಾಯ್ತಿ ಅಧ್ಯಕ್ಷರು, ವಾರ್ಡ್ ಸದಸ್ಯರು, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.
Comments