top of page

ಸಿದ್ದರಾಮಯ್ಯ ರಾಜ್ಯದ ಜನರ ಕ್ಷಮೆ ಕೇಳಬೇಕು: ಸಿದ್ದಾಪುರದಲ್ಲಿ ಪ್ರತಿಭಟನೆ

  • Writer: Ananthamurthy m Hegde
    Ananthamurthy m Hegde
  • Nov 4, 2024
  • 1 min read

ಸಿದ್ದಾಪುರ : ರೈತರ ಜಮೀನನ್ನು ವಕ್ಫ್ ಬೋರ್ಡ್ ಕಬಳಿಸುತ್ತಿದ್ದು ಇದಕ್ಕೆ ಸರಕಾರ ಹಾಗೂ ಸಚಿವ ಜಮೀರ್ ಅಹಮದ್ ಕುಮಕ್ಕು ನೀಡುತ್ತಿರುವುದು ರೈತರಿಗೆ ಆತಂಕಕ್ಕೆ ಕಾರಣವಾಗಿದೆ, ಕಬಳಿಕೆ ಆದ ಜಮೀನನ್ನ ರೈತರಿಗೆ ಮರಳಿಸುವಂತೆ ಆದೇಶವನ್ನು ಹೊರಡಿಸಬೇಕು ಎಂದು ರಾಜ್ಯ ಸರ್ಕಾರವನ್ನ ಒತ್ತಾಯಿಸಿ ಸಿದ್ದಾಪುರ ಬಿಜೆಪಿ ಮಂಡಲದ ವತಿಯಿಂದ ಮಂಡಲ ಅಧ್ಯಕ್ಷ ಎಂ.ಕೆ ತಿಮ್ಮಪ್ಪ ಅವರ ನೇತೃತ್ವದಲ್ಲಿ ತಹಸೀಲ್ದಾರ್ ಕಚೇರಿ ಎದುರು ಬೃಹತ್ ಪ್ರತಿಭಟನೆಯನ್ನು ನಡೆಸಿ ತಹಸೀಲ್ದಾರ್ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಸಚಿವ ಜಮೀರ್ ಅಹಮದ್ ಅವರನ್ನು ಸಚಿವ ಸ್ಥಾನದಿಂದ ಕೂಡಲೇ ಉಚ್ಛಾಟಿಸಬೇಕು, ಸಿದ್ದರಾಮಯ್ಯನವರು ರಾಜ್ಯದ ಜನರ ಕ್ಷಮೆ ಕೇಳಬೇಕು ಮತ್ತು ಸ್ಪಷ್ಟನೆ ನೀಡಬೇಕು, ಇನ್ನು ಮುಂದೆ ಯಾವುದೇ ವಕ್ಫ್ ಅದಾಲತ್ ನಡೆಸದಂತೆ ಸರ್ಕಾರ ಆದೇಶವನ್ನು ಹೊರಡಿಸಬೇಕು, ಇದಕ್ಕೆ ಸಂಬAಧಿಸಿದ ಗೆಜೆಟ್ ನೋಟಿಫಿಕೇಶನ್ ಹಿಂಪಡೆಯಬೇಕು, ಕೇಂದ್ರ ಸರ್ಕಾರ ತರುತ್ತಿರುವ ವಕ್ಪ ತಿದ್ದುಪಡಿ ಕಾಯ್ದೆಗೆ ರಾಜ್ಯ ಸರ್ಕಾರ ಮುಂದಿನ ಅಧಿವೇಶನದಲ್ಲಿ ಒಮ್ಮತದ ನಿರ್ಣಯವನ್ನು ಅಂಗೀಕರಿಸಿ ಕೇಂದ್ರ ಸರ್ಕಾರಕ್ಕೆ ಕಳಿಸಿ ಕೊಡಬೇಕೆಂದು ಒತ್ತಾಯಿಸಿ ಪ್ರತಿಭಟಿಸಿದರು.

ಪ್ರತಿಭಟನೆಯಲ್ಲಿ ಮಂಡಲ ಅಧ್ಯಕ್ಷ ಎಂ.ಕೆ ತಿಮ್ಮಪ್ಪ, ಜಿಲ್ಲಾ ವಿಶೇಷ ಆಹ್ವಾನಿತ ಗುರುರಾಜ ಶಾನಭಾಗ, ಕೃಷ್ಣಮೂರ್ತಿ ಕಡಕೇರಿ, ರಾಜ್ಯ ಕಾರ್ಯಕಾರಣಿ ಸದಸ್ಯ ಕೆ.ಜಿ ನಾಯ್ಕ ಹಣಜಿ ಬೈಲ್ ಎಸ್.ಸಿ ಮೋರ್ಚಾದ ಜಿಲ್ಲಾಧ್ಯಕ್ಷ ನಂದನ ಬೋರ್ಕರ್ ಮತ್ತಿತರರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದರು. ಗ್ರೇಡ್ ಟು ತಹಸೀಲ್ದಾರ್ ಜಿ ಶಾಮ್ ಸುಂದರ್ ಅವರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿ ತೋಟಪ್ಪ ನಾಯ್ಕ, ಎಸ್.ಕೆ ಮೆಸ್ತ, ಪಟ್ಟಣ ಪಂಚಾಯತ್ ಅಧ್ಯಕ್ಷೆ ಚಂದ್ರಕಲಾ ನಾಯ್ಕ, ಪ್ರಮುಖರಾದ ದಯಾನಂದ ಕಡಿಕೇರಿ, ಕೃಷ್ಣಮೂರ್ತಿ ಐಸುರ್, ನಿಕಟಪೂರ್ವ ಅಧ್ಯಕ್ಷ ಮಾರುತಿ ನಾಯ್ಕ, ಪಟ್ಟಣ ಪಂಚಾಯತ ಉಪಾಧ್ಯಕ್ಷ ವಿನಯ ಹೊನ್ನೆಗುಂಡಿ, ಸ್ಥಾಯಿ ಸಮಿತಿ ಅಧ್ಯಕ್ಷ ವಿಜೇಂದ್ರ ಗೌಡರ್, ಮಂಜುನಾಥ ಭಟ್, ಪ.ಪಂ ಸದಸ್ಯರಾದ ಸುಮನಾ ಕಾಮತ, ಯಶೋಧಾ ಮಡಿವಾಳ, ಸುರೇಶ ನಾಯ್ಕ, ವಿಜೇತ ಗೌಡರ್, ಪ್ರಸನ್ನ ಹೆಗಡೆ, ಲೋಕೇಶ ನಾಯ್ಕ ಮತ್ತಿತರರು ಉಪಸ್ಥಿತರಿದ್ದರು.

Comments


Top Stories

bottom of page