ಸಿದ್ದರಾಮಯ್ಯಗೆ ರಿಲೀಫ್: ವಿಚಾರಣೆ ಮುಂದೂಡಿದ ಹೈಕೋರ್ಟ್
- Ananthamurthy m Hegde
- Nov 5, 2024
- 1 min read

ಬೆಂಗಳೂರು: ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯಗೆ ಸಿಬಿಐ ತನಿಖೆ ಭೀತಿ ಎದುರಾಗಿತ್ತು. ದೂರುದಾರ ಸ್ನೇಹಮಯಿ ಕೃಷ್ಣ ಅವರು ಈ ಒಂದು ಪ್ರಕರಣ ಸಿಬಿಐ ತನಿಖೆಗೆ ಕೋರಿ ರಿಟ್ ಅರ್ಜಿ ಸಲ್ಲಿಸಿದ್ದರು. ಮಂಗಳವಾರ ವಿಚಾರಣೆ ಕೈಗೆತ್ತಿಕೊಂಡ ವೇಳೆಯಲ್ಲಿ ಕಾಲಾವಕಾಶ ಕೋರಿದ ಹಿನ್ನಲೆಯಲ್ಲಿ ನವೆಂಬರ್.೨೬ಕ್ಕೆ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿಕೆ ಮಾಡಿದೆ.
ಮಂಗಳವಾರ ಸ್ನೇಹಮಯಿ ಕೃಷ್ಣ ಅವರು ಲೋಕಾಯುಕ್ತ ತನಿಖೆಯಲ್ಲಿ ನಂಬಿಕೆಯಿಲ್ಲ. ಸಿಬಿಐ ತನಿಖೆಗೆ ಆದೇಶಿಸುವಂತೆ ಕೇರಿ ಸಲ್ಲಿಸಿದ್ದಂತ ರಿಟ್ ಅರ್ಜಿಯನ್ನು ಹೈ ಕೋರ್ಟ್ ನಲ್ಲಿ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠದಲ್ಲಿ ವಿಚಾರಣೆ ನಡೆಯಿತು. ಈ ವೇಳೆಯಲ್ಲಿ ಹೈಕೋರ್ಟ್ ಗೆ ಈ ಪ್ರಕರಣ ಸಂಬAಧ ವಾದಿಸಲು ಕಾಲಾವಕಾಶ ನೀಡುವಂತೆ ಸಿಎಂ ಸಿದ್ಧರಾಮಯ್ಯ ಪರ ವಕೀಲರು ಕೋರಿದರು. ಈ ಹಿನ್ನಲೆಯಲ್ಲಿ ಹೈಕೋರ್ಟ್ ವಿಚಾರಣೆಯನ್ನು ನ.೨೬ಕ್ಕೆ ಮುಂದೂಡಿದೆ.
ಕಳೆದ ಸಪ್ಟೆಂಬರ್ ೨೭ರಂದು ಸ್ನೇಹಮಯಿ ಕೃಷ್ಣ ಅವರು ಲೋಕಾಯುಕ್ತ ತನಿಖೆಯ ಮೇಲೆ ನಂಬಿಕೆ ಇಲ್ಲ ಎಂದು ಅವರು ಹೈಕೋರ್ಟಿಗೆ ಸಿಬಿಐ ತನಿಖೆಗೆ ಆದೇಶ ಕೋರಿ ರಿಟ್ ಅರ್ಜಿ ಸಲ್ಲಿಸಿದ್ದರು.















Comments