ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಡಿದ್ರೆ ಜೈಲೂಟ ಫಿಕ್ಸ್
- Ananthamurthy m Hegde
- Jun 21
- 1 min read

ಕರ್ನಾಟಕ ಸರ್ಕಾರ ಸಾಮಾಜಿಕ ಜಾಲತಾಣಗಳಲ್ಲಿಸುಳ್ಳು ಸುದ್ದಿ ಮತ್ತು ತಪ್ಪು ಮಾಹಿತಿಯನ್ನು ಹರಡುವುದನ್ನು ತಡೆಗಟ್ಟಲು ಕಠಿಣ ಕಾನೂನು ಜಾರಿಗೆ ತರಲು ಮುಂದಾಗಿದೆ. ಇನ್ಮುಂದೆ ಯಾರಾದರೂ ತಪ್ಪಾಗಿ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಡಿದರೆ ಜೈಲು ಶಿಕ್ಷೆ ಜೊತೆಗೆ ಲಕ್ಷಾಂತರ ರೂಪಾಯಿ ದಂಡ ಕೂಡ ಕಟ್ಟಬೇಕಾಗುತ್ತದೆ. ಹೀಗಾಗಿ ಇನ್ಮುಂದೆ ಯಾರಾದರೂ ಸುಳ್ಳು ಸುದ್ದಿ ಹರಡುವ ಮುನ್ನ ಎಚ್ಚರದಿಂದರಬೇಕು.
ಕರ್ನಾಟಕ ತಪ್ಪು ಮಾಹಿತಿ ಮತ್ತು ಸುಳ್ಳು ಸುದ್ದಿ (ನಿಷೇಧ) ಮಸೂದೆ-2025ರ ರೂಪದಲ್ಲಿ ಈ ಕಾನೂನನ್ನು ಸಿದ್ಧಪಡಿಸಲಾಗಿದ್ದು, ಇದರ ಅಡಿಯಲ್ಲಿ ಸುಳ್ಳು ಸುದ್ದಿ ಹಂಚಿಕೊಂಡವರಿಗೆ ಜೈಲು ಶಿಕ್ಷೆ ಮತ್ತು ದಂಡ ಕೂಡ ವಿಧಿಸಲಾಗುತ್ತದೆ.















Comments