ಸಾಮರ್ಥ್ಯ ಸೌಧದಲ್ಲಿ ಅವಲೋಕನ ಸಭೆ ಯಶಸ್ವಿ
- Ananthamurthy m Hegde
- Dec 21, 2024
- 1 min read
ಯಲ್ಲಾಪುರ: ತಾಲೂಕಿನಲ್ಲಿ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಕಾರ್ಯಾರಂಭ ಮಾಡಿ ನೂರು ದಿನಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಅವಲೋಕನ ಸಭೆ ತಾ.ಪಂ ಆವಾರದ ಸಾಮರ್ಥ್ಯ ಸೌಧದಲ್ಲಿ ನಡೆಯಿತು.
ಅಧ್ಯಕ್ಷತೆ ವಹಿಸಿದ್ದ ಸಮಿತಿಯ ಅಧ್ಯಕ್ಷ ಉಲ್ಲಾಸ ಶಾನಭಾಗ ಮಾತನಾಡಿ, ಸರ್ಕಾರದ ಸೌಲಭ್ಯಗಳನ್ನು ಅರ್ಹರಿಗೆ ತಲುಪಿಸುವಲ್ಲಿ ಶ್ರಮಿಸಬೇಕೆಂಬ ಉದ್ದೇಶ ಹಿಂದಿನಿಂದಲೂ ಇತ್ತು. ಇದೀಗ ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿಯ ಮೂಲಕ ಅದು ಈಡೇರಿದೆ. ಗ್ಯಾರಂಟಿ ಯೋಜನೆಗಳನ್ನು ಎಲ್ಲ ಅರ್ಹರಿಗೆ ತಲುಪಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ. ಜನರಿಗೆ ಇದರಲ್ಲಿ ಸಮಸ್ಯೆ ಇದ್ದರೆ ಸರ್ಕಾರಿ ಕಚೇರಿಗೆ ಅಲೆದಾಡಬೇಕಾಗಿಲ್ಲ. ನಮ್ಮ ಕಚೇರಿಗೆ ಬಂದರೆ ಅಧಿಕಾರಿಗಳಲ್ಲಿ ಮಾತನಾಡಿ ನಾವೇ ಸಮಸ್ಯೆ ಬಗೆಹರಿಸುತ್ತೇವೆ ಎಂದರು.
ಪ.ಪಂ ಅಧ್ಯಕ್ಷೆ ನರ್ಮದಾ ನಾಯ್ಕ, ವಿವಿಧ ಇಲಾಖೆಗಳ ಅಧಿಕಾರಿಗಳು, ಸಮಿತಿಯ ಸದಸ್ಯರು ಭಾಗವಹಿಸಿದ್ದರು.












Comments