ಸಕ್ಕರೆ ನಗರಿಯಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ
- Ananthamurthy m Hegde
- Dec 21, 2024
- 2 min read

ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ನಿನ್ನೆಯಿಂದ ಮೂರು ದಿನಗಳ ಕಾಲ ಕನ್ನಡ ನುಡಿ ಜಾತ್ರೆ ಹಾಗೂ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ ಸಿಕ್ಕಿದೆ. ಧ್ವಜಾರೋಹಣ ನೆರವೇರಿಸುವ ಮೂಲಕ ಅಧಿಕೃತವಾಗಿ ಚಾಲನೆಯನ್ನು ನೀಡಲಾಯಿತು . ಬೆಳಗ್ಗೆ 6.30ಕ್ಕೆ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಲಾಯಿತು . ಸಮ್ಮೇಳನಾಧ್ಯಕ್ಷರಾದ ಗೊ.ರು.ಚನ್ನಬಸಪ್ಪ ಅವರ ಉಪಸ್ಥಿತಿಯಲ್ಲಿ ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಮ್ಮೇಳನ ಸ್ವಾಗತ ಸಮಿತಿಯ ಅಧ್ಯಕ್ಷರಾದ ಎನ್. ಚಲುವರಾಯಸ್ವಾಮಿ ಅವರು ರಾಷ್ಟ್ರಧ್ವಜಾರೋಹಣ ಮಾಡಿದರು. ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಹಾಗೂ ಸಮ್ಮೇಳನ ಸ್ವಾಗತ ಸಮಿತಿಯ ಗೌರವ ಕಾರ್ಯಾಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಕನ್ನಡ ಸಾಹಿತ್ಯ ಪರಿಷತ್ತಿನ ಧ್ವಜಾರೋಹಣ ಹಾಗೂ ಮಂಡ್ಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಂಚಾಲಕಿ ಮೀರಾ ಶಿವಲಿಂಗಯ್ಯ ಅವರು ನಾಡ ಧ್ವಜಾರೋಹಣ ನೆರವೇರಿಸಿದರು. ಬಳಿಕ ನಡೆದ ಮೆರವಣಿಗೆಯಲ್ಲಿ ನಂದಿಧ್ವಜ, ಚಕ್ಕಡಿಗಾಡಿ, ಕೊಂಬುಕಹಳೆ, ನಾದಸ್ವರ, ಸ್ತಬ್ಧಚಿತ್ರ, ವೀರಗಾಸೆ, ತಮಟೆ, ಕಂಸಾಳೆ, ಮಹಿಳಾ ವೀರಗಾಸೆ, ಕೀಲುಕುದುರೆ ಸೇರಿದಂತೆ ಇತರ ಸಾಂಸ್ಕೃತಿಕ ಕಲಾ ತಂಡಗಳು ಭಾಗವಹಿಸಿದ್ದವು.
ಸಮ್ಮೇಳನಾಧ್ಯಕ್ಷರ ಮೆರವಣಿಗೆ
ಬೆಳಿಗ್ಗೆ 7 ಗಂಟೆಗೆ ಸಮ್ಮೇಳನಾಧ್ಯಕ್ಷರ ಮೆರವಣಿಗೆಯು ಮಂಡ್ಯ ನಗರದ ಸರ್ ಎಂ.ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗದಿಂದ ಪ್ರಾರಂಭವಾಗಿ ಮೈಸೂರು - ಬೆಂಗಳೂರು ರಸ್ತೆ ಮಾರ್ಗವಾಗಿ ಸ್ಯಾಂಜೋ ಆಸ್ಪತ್ರೆ ಹಾಗೂ ಹೋಟೆಲ್ ಅಮರಾವತಿ ಹಿಂಭಾಗ ಸಮ್ಮೇಳನದ ವೇದಿಕೆಗೆ ತಲುಪಿತು . ಮೈಸೂರು ರಾಜವಂಶಸ್ಥರಾದ ಪ್ರಮೋದಾದೇವಿ ಅವರು ಮೆರವಣಿಗೆ ಉದ್ಘಾಟನೆ ಮಾಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಉದ್ಘಾಟನೆ
ಬೆಳಿಗ್ಗೆ 10.30 ಗಂಟೆಗೆ ಸಾಹಿತ್ಯ ಸಮ್ಮೇಳನದ ಉದ್ಘಾಟನಾ ಸಮಾರಂಭವನ್ನು ಪ್ರಧಾನ ವೇದಿಕೆಯಲ್ಲಿ ಸಿಎಂ ಸಿದ್ಧರಾಮಯ್ಯ ಅವರು ಉದ್ಘಾಟಿಸಿದ್ದಾರೆ. ಸಮ್ಮೇಳನಾಧ್ಯಕ್ಷರ ಭಾಷಣವನ್ನು ನಾಡೋಜ ಡಾ ಗೊ.ರು. ಚನ್ನಬಸಪ್ಪ ಅವರು ಮಾಡಿದ್ದಾರೆ. ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ. ನಿರ್ಮಲಾನಂದನಾಥ ಸ್ವಾಮೀಜಿ . ಶುಭನುಡಿ ಆಡಿದ್ರು. ಕೇಂದ್ರ ಸಚಿವ ಹಾಗೂ ಸಂಸದ ಹೆಚ್. ಡಿ. ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಿ. ಕೆ.ಶಿವಕುಮಾರ್, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಚಂದ್ರಶೇಖರ ಕಂಬಾರ, ನಿಕಟಪೂರ್ವ ಸಮ್ಮೇಳನಾಧ್ಯಕ್ಷ ಡಾ. ದೊಡ್ಡ ರಂಗೇಗೌಡ, ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಸಮ್ಮೇಳನ ಸ್ವಾಗತ ಸಮಿತಿಯ ಅಧ್ಯಕ್ಷ ಎನ್. ಚಲುವರಾಯಸ್ವಾಮಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಗೂ ಸಮ್ಮೇಳನ ಸ್ವಾಗತ ಸಮಿತಿಯ ಗೌರವ ಕಾರ್ಯಾಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಉಪಸ್ಥಿತರಿದ್ದರು .
ಸಮ್ಮೇಳನದ್ಲಲಿ ದರ್ಶನ್ ಫ್ಯಾನ್ಸ್ ಕಿರಿಕಿರಿ
ಸಾಹಿತ್ಯ ಸಮ್ಮೇಳನದಲ್ಲಿ ದರ್ಶನ್ ಫ್ಯಾನ್ಸ್ ಕಿರಿಕಿರಿ ಮಾಡಿರುವ ಘಟನೆ ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ದರ್ಶನ್ ಅಭಿಮಾನಿಗಳನ್ನು ಸಮ್ಮೇಳನದಿಂದಲೇ ಓಡಿಸಿದ ಘಟನೆ ಮಂಡ್ಯದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಘಟನೆ ನಡೆದಿದೆ.
ರಾತ್ರಿ ವೇಳೆ ಪ್ರಧಾನ ವೇದಿಕೆಯಲ್ಲಿ ಸ್ವರ ಯಾತ್ರೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯುತ್ತಿತ್ತು. ಕಾರ್ಯಕ್ರಮದಲ್ಲಿ ಖ್ಯಾತ ಗಾಯಕ ರಾಜೇಶ್ ಕೃಷ್ಣನ್ ರಿಂದ ಗಾಯನ ಕಾರ್ಯಕ್ರಮವೂ ನಡೆದಿದೆ.ರಾಜೇಶ್ ಕೃಷ್ಣನ್ ಹಾಡುವಾಗ ದರ್ಶನ್ ಫ್ಯಾನ್ಸ್ ಕಿರಿಕಿರಿ ಮಾಡಿದ್ದಾರೆ.
Comments