top of page

ಹುಬ್ಬಳ್ಳಿಯಿಂದ ಪ್ರಯಾಗ್‌ರಾಜ್‌ಗೆ ವಿಶೇಷ ರೈಲು

  • Writer: Ananthamurthy m Hegde
    Ananthamurthy m Hegde
  • Dec 26, 2024
  • 1 min read
ree

ನೈಋತ್ಯ ರೈಲ್ವೆ ಹುಬ್ಬಳ್ಳಿಯಿಂದ ಪ್ರಯಾಗ್‌ರಾಜ್‌ಗೆ ಏಕಮಾರ್ಗ ವಿಶೇಷ ಎಕ್ಸಪ್ರೆಸ್​ ರೈಲು ಪ್ರಾರಂಭಿಸಿದೆ. ಆ ಮೂಲಕ ಪ್ರಯಾಣಿಕರ ದಟ್ಟಣೆ ನಿವಾರಿಸಲು ಇಲಾಖೆ ಮುಂದಾಗಿದೆ. ಡಿಸೆಂಬರ್ 26 (ಗುರುವಾರ) ರಂದು ಎಸ್ಎಸ್‌ಎಸ್ ಹುಬ್ಬಳ್ಳಿ-ಪ್ರಯಾಗ್‌ರಾಜ್ ಏಕಮಾರ್ಗ ವಿಶೇಷ ಎಕ್ಸ್ ಪ್ರೆಸ್ (07369) ರೈಲು ಹುಬ್ಬಳ್ಳಿಯಿಂದ 11 ಗಂಟೆಗೆ ಹೊರಟು, ಶನಿವಾರ 03 ಗಂಟೆಗೆ ಪ್ರಯಾಗ್‌ರಾಜ್ ತಲುಪಲಿದೆ. ಈ ರೈಲು ಧಾರವಾಡ, ಬೆಳಗಾವಿ, ಘಟಪ್ರಭಾ, ಮಿರಜ್, ಸಾಂಗ್ಲಿ, ಕರಾಡ್, ಪುಣೆ, ದೌಂಡ್ ಚೋರ್ಡ್ ಲೈನ್, ಅಹದಗರ, ಮನ್ನಡ, ಭುಸಾವಲ್, ಖಾಂಡ್ಯಾ, ತಲಾಡಿಯಾ, ಛಾನೆರಾ, ಖಿರ್ಕಿಯಾ, ಹರ್ದಾ, ಬಾನಾಪುರ, ಇಟಾರ್ಸಿ, ಪಿಪರಿಯಾ, ನರಸಿಂಗಪುರ, ಜಬಲ್ಪುರ, ಕಟ್ಟಿ, ಮೈಹಾರ್, ಸತ್ನಾ ಮತ್ತು ಮಾಣಿಕ್ಷುರ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ. ಈ ರೈಲು 11 ಸ್ವೀಪರ್ ಕ್ಲಾಸ್, 7 ಜನರಲ್ ಸೆಕೆಂಡ್ ಕ್ಲಾಸ್ ಮತ್ತು ಎಸ್‌ಎಲ್‌ಆರ್​ಡಿ ಸೇರಿದಂತೆ ಒಟ್ಟು 20 ಬೋಗಿಗಳನ್ನು ಹೊಂದಿದೆ. ಈ ರೈಲಿನ ಆಗಮನ, ನಿರ್ಗಮನ ಸಮಯ ತಿಳಿಯಲು ಪ್ರಯಾಣಿಕರು ಭಾರತೀಯ ರೈಲ್ವೆಯ ವೆಬ್ ಸೈಟ್ www.enquiry.indianrail.gov.in, 139 ನಂಬರ್​ಗೆ ಕರೆ ಮಾಡುವ ಮೂಲಕ ಅಥವಾ ಎನ್‌ಟಿಇಎಸ್‌ ಅಪ್ಲಿಕೇಶನ್​ ಅನ್ನು ಡೌನ್ಲೋಡ್ ಮಾಡಿ ಮಾಹಿತಿ ಪಡೆಯಬಹುದಾಗಿದೆ.


ಕುಂಭಮೇಳ ಪ್ರಯುಕ್ತ ವಿಶೇಷ ರೈಲು

ಕುಂಭಮೇಳದಲ್ಲಿ ಭಾಗವಹಿಸುವ ಪ್ರಯಾಣಿಕರ ನಿರೀಕ್ಷಿತ ದಟ್ಟಣೆಯನ್ನು ನಿವಾರಿಸಲು ನೈಋತ್ಯ ರೈಲ್ವೆ ಏಕಮಾರ್ಗ ವಿಶೇಷ ರೈಲನ್ನು ಪ್ರಾರಂಭಿಸಿದೆ. ಈ ರೈಲು (06577) ಡಿಸೆಂಬರ್ 26 (ಗುರುವಾರ) ರಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು ನಿಲ್ದಾಣದಿಂದ ರಾತ್ರಿ 11 ಗಂಟೆಗೆ ಹೊರಟು, ಶನಿವಾರ (ಡಿಸೆಂಬರ್ 28) 01:30 ಗಂಟೆಗೆ ಪ್ರಯಾಗ್‌ರಾಜ್ ತಲುಪಲಿದೆ. ಈ ರೈಲು ಕೃಷ್ಣರಾಜಪುರಂ, ಬಂಗಾರಪೇಟೆ, ಜೋಲಾರ್ ಪೆಟ್ಟೆ, ಕಟ್ಟಾಡಿ, ರೇಣಿಗುಂಟ, ಗುಡೂರು, ವಿಜಯವಾಡ, ವಾರಂಗಲ್, ಬಲ್ಲಾರ್ಷಾ, ನಾಗುರ, ಇಟಾರ್ಸಿ, ಜಬಲ್ಪುರ್, ಕಟ್ಟಿ, ಸತ್ಕಾ ಮತ್ತು ಮಾಣಿಕುರ ನಿಲ್ದಾಣಗಳಲ್ಲಿ ನಿಲ್ಲಲಿದೆ. ಈ ರೈಲು 15 ಸ್ವೀಪರ್ ಕ್ಲಾಸ್ ಬೋಗಿಗಳು, 3 ಸಾಮಾನ್ಯ ದ್ವಿತೀಯ ದರ್ಜೆ ಬೋಗಿಗಳು ಮತ್ತು 2 ಎಸ್ಎಲ್‌ಆರ್​ಡಿ ಸೇರಿದಂತೆ 20 ಬೋಗಿಗಳನ್ನು ಒಳಗೊಂಡಿದೆ. ಈ ರೈಲಿನ ಸಂಪೂರ್ಣ ಮಾಹಿತಿಯನ್ನು ತಿಳಿಯಲು ಪ್ರಯಾಣಿಕರು ಭಾರತೀಯ ರೈಲ್ವೆಯ ವೆಬ್ ಸೈಟ್ www.enquiry.indianrail.gov.in ಭೇಟಿ ನೀಡಿ. ಅಥವಾ 139 ನಂಬರ್​ಗೆ ಕರೆ ಮಾಡುವ ಮೂಲಕ ಮಾಹಿತಿ ಪಡೆಯಬಹುದಾಗಿದೆ.

Comments


Top Stories

bottom of page