ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿಸಲ್ಲಿಸುವ ವಿದ್ಯಾರ್ಥಿಗಳಿಗೆ ಪ್ರವೇಶಾತಿಗೆ ಅನುಮತಿ ನೀಡಿ ; ಸಚಿವ ಮಂಕಾಳ ವೈದ್ಯ
- Ananthamurthy m Hegde
- Jul 2
- 1 min read

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ವಿದ್ಯಾರ್ಥಿಗಳಿಗೆ ಹಾಸ್ಟೆಲುಗಳಲ್ಲಿ ಪ್ರವೇಶಾತಿ ನೀಡುವಲ್ಲಿ ಯಾವುದೇ ಕೊರತೆಯಾಗಬಾರದು. ಅರ್ಜಿ ಸಲ್ಲಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ನೆಪ ಹೇಳದೆ ಹಾಸ್ಟೆಲಿಗೆ ಪ್ರವೇಶ ನೀಡಬೇಕು ಎಂದು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅವರು ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ನಡೆದ ತ್ರೈಮಾಸಿಕ ಕೆ ಡಿ ಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಸಮಾಜ ಕಲ್ಯಾಣ ಹಿಂದುಳಿದ ವರ್ಗ ಅಲ್ಪಸಂಖ್ಯಾತ ಸೇರಿದಂತೆ ಯಾವುದೇ ಇಲಾಖೆಯ ಹಾಸ್ಟೆಲ್ ಗಳಲ್ಲಿ ಪ್ರವೇಶಕ್ಕೆ ಅರ್ಜಿ ಸಲ್ಲಿಸುವ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರವೇಶಾತಿಗೆ ಅನುಮತಿ ನೀಡಬೇಕು ನಿಗದಿತ ಹೆಚ್ಚಿನ ವಿದ್ಯಾರ್ಥಿಗಳು ನೇಮಕಾತಿ ಬಯಸಿದ್ದಲ್ಲಿ ಬಾಡಿಗೆ ಕಟ್ಟಡ ಪಡೆದು ಹಾಸ್ಟೆಲಿಗೆ ಎಲ್ಲಾ ಸೌಲಭ್ಯ ಕಲ್ಪಿಸುವಂತೆ ತಿಳಿಸಿದ ಸಚಿವರು ಜಿಲ್ಲೆಯ ಎಲ್ಲಾ ಶಾಲೆ ಮತ್ತು ಅಂಗನವಾಡಿಗಳಿಗೆ ಸ್ವಂತ ಕಟ್ಟಡ ಒದಗಿಸುವ ಕಾರ್ಯವನ್ನು ಆದ್ಯತೆಯಲ್ಲಿ ಮಾಡಬೇಕು ಎಂದರು. ಸಭೆಯಲ್ಲಿ ಶಿರಸಿ ಶಾಸಕ ಭೀಮಣ್ಣ ನಾಯಕ್, ಕಾರವಾರ ಶಾಸಕ ಸತೀಶ್ ಶೈಲ್, ಆರ್ ವಿ ದೇಶಪಾಂಡೆ ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯ ಮುಂತಾದವರು ಇದ್ದರು
Comments