top of page

ಹೊಸ ವರ್ಷಾಚರಣೆಗೆ ದೇವಸ್ಥಾನಗಳಿಗೆ ಹರಿದು ಬಂದ ಭಕ್ತ ಸಾಗರ

  • Writer: Ananthamurthy m Hegde
    Ananthamurthy m Hegde
  • Jan 1
  • 1 min read
ree

ಹೊಸ ವರ್ಷಾರಂಭ ಸಂದರ್ಭದಲ್ಲಿ ಕರ್ನಾಟಕ ಕರಾವಳಿಯ ದೇವಸ್ಥಾನಗಳಿಗೆ ಭಕ್ತರ ದಂಡೇ ಹರಿದು ಬರುತ್ತಿದೆ. ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನ ಹಾಗೂ ಧರ್ಮಸ್ಥಳ ಮಂಜುನಾಥೇಶ್ವರ ದೇಗುಲಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ. ಲಕ್ಷಾಂತರ ಸಂಖ್ಯೆಯಲ್ಲಿ ಆಗಮಿಸಿದ ಭಕ್ತರ ದಂಡು ಮಂಜುನಾಥ ಸ್ವಾಮಿಯ ದರ್ಶನಕ್ಕೆ ಮುಗಿಬೀಳುತ್ತಿದ್ದಾರೆ. ಬೆಂಗಳೂರು ಹಾಗೂ ಉತ್ತರ ಕರ್ನಾಟಕ ಭಾಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುತ್ತಿದ್ದಾರೆ. ಸದ್ಯ ದೇವಸ್ಥಾನದ ಕ್ಯೂ ಸೆಂಟರ್ ಮತ್ತು ದೇವಸ್ಥಾನದ ಮುಂಭಾಗದಲ್ಲಿಯೂ ಭಾರೀ ಸಂಖ್ಯೆಯಲ್ಲಿ ಭಕ್ತ ಸಮೂಹ ಸೇರಿದ್ದು, ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆಯುತ್ತಿದ್ದಾರೆ. ಕರಾವಳಿಯ ದೇವಸ್ಥಾನಗಳಿಗೆ ಮಾತ್ರವಲ್ಲದೆ ಮೈಸೂರು, ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಪ್ರದೇಶಗಳ ದೇಗುಲಗಳಲ್ಲಿ ಬೆಳಗ್ಗೆ ಭಕ್ತ ಸಮೂಹ ದೇವರ ದರ್ಶನಕ್ಕೆ ಆಗಮಿಸಿದೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಕೂಡ ಹೊಸ ವರ್ಷದ ಸಂಭ್ರಮಾಚರಣೆ ಹಿನ್ನೆಲೆ ಮಾದಪ್ಪನಿಗೆ ಸಹಸ್ರಾರು ಭಕ್ತರಿಂದ ಪೂಜೆ ಸಲ್ಲಿಕೆಯಾಗಿದೆ. ಮಲೆ ಮಹದೇಶ್ವರನಿಗೆ ಸಾವಿರಾರು ಭಕ್ತರು ಚಿನ್ನದ ರಥ, ಬೆಳ್ಳಿ ರಥ, ಬಸವ ವಾಹನ, ರುದ್ರಾಕ್ಷಿ ಮಂಟಪ ಮತ್ತಿತರ ಸೇವೆ ಸಲ್ಲಿಸುತ್ತಿದ್ದಾರೆ. ಮಂಗಳವಾರದಿಂದಲೇ ಅಪಾರ ಸಂಖ್ಯೆಯ ಭಕ್ತರು ಬೆಟ್ಟದಲ್ಲಿ ಬೀಡುಬಿಟ್ಟಿದ್ದಾರೆ.





Comments


Top Stories

bottom of page